ADVERTISEMENT

ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌; ಉಕ್ಕಿ ಬಂದ ಆನಂದದ ಕಣ್ಣೀರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಡಿಸೆಂಬರ್ 2024, 14:13 IST
Last Updated 12 ಡಿಸೆಂಬರ್ 2024, 14:13 IST
<div class="paragraphs"><p>ಗುಕೇಶ್</p></div>

ಗುಕೇಶ್

   

ಸಿಂಗಪುರ: ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ಬೆನ್ನಲ್ಲೇ ಭಾರತದ ಡಿ.ಗುಕೇಶ್ ಅವರ ಕಣ್ಣಲ್ಲಿ ಆನಂದಭಾಷ್ಪ ಧಾರೆಯಾಯಿತು.

ವಿಶ್ವ ಚಾಂಪಿಯನ್‌ಷಿಪ್ ಗೆಲುವಿನ ಕನಸು ನನಸಾದ ಕ್ಷಣ ಗುಕೇಶ್ ಅವರಿಗೆ ತಮ್ಮ ಭಾವನೆಗಳನ್ನು ತಡೆದುಕೊಳ್ಳಲಿಲ್ಲ. ಅಲ್ಲದೆ ಭಾವುಕರಾಗಿ ಕಣ್ಣೀರು ಸುರಿಸಿದ್ದಾರೆ.

ADVERTISEMENT

ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹರಿದಾಡುತ್ತಿದೆ.

18 ವರ್ಷದ ಗುಕೇಶ್, ಫೈನಲ್‌ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಮಣಿಸಿ, ಚಾಂಪಿಯನ್ ಆದರು. 14ನೇ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದ್ದಾರೆ.

ಆ ಮೂಲಕ ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ವಿಶ್ವದ ಅತಿ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಅಲ್ಲದೆ ಐದು ಬಾರಿಯ ವಿಶ್ವ ಚಾಂಪಿಯನ್ ಆನಂದ್ ಬಳಿಕ ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ಭಾರತೀಯ ಆಟಗಾರ ಎನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.