
ಪ್ರಜಾವಾಣಿ ವಾರ್ತೆ
ಮೈಸೂರು: ನಗರದ ಬೋಗಾದಿ ನಿವಾಸಿ, ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯ್) ನಿವೃತ್ತ ಜಿಮ್ನಾಸ್ಟಿಕ್ ತರಬೇತುದಾರ ಅರುಣ್ ಕುಮಾರ್ ಪಾಟೀಲ (70) ಗುರುವಾರ ನಿಧನರಾದರು.
ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಶುಕ್ರವಾರ ಬೆಳಿಗ್ಗೆ 9ಕ್ಕೆ ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಾಡಿನ ಹಲವು ಹೆಸರಾಂತ ಕ್ರೀಡಾಪಟುಗಳಿಗಷ್ಟೇ ಅಲ್ಲದೆ, ನೂರಾರು ಆಸಕ್ತರಿಗೆ ಜಿಮ್ನಾಸ್ಟಿಕ್ ತರಬೇತಿ ನೀಡಿದ್ದರು. ವಿವಿಧ ಕ್ರೀಡಾಸಂಸ್ಥೆಗಳ ಪದಾಧಿಕಾರಿಯಾಗಿದ್ದರು. ಸಾಯ್‌ನಲ್ಲಿ ಸೇವಾ ನಿವೃತ್ತಿ ನಂತರ ಮೈಸೂರು ವಿಶ್ವವಿದ್ಯಾಲಯದ ಜಿಮ್ನಾಸ್ಟಿಕ್ ಕ್ರೀಡಾ ತರಬೇತುದಾರರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.