ADVERTISEMENT

Asian Games: ಪುರುಷರ ರೋಯಿಂಗ್‌ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಸೆಪ್ಟೆಂಬರ್ 2023, 4:13 IST
Last Updated 25 ಸೆಪ್ಟೆಂಬರ್ 2023, 4:13 IST
<div class="paragraphs"><p>ಭಾರತದ&nbsp;ರೋಯಿಂಗ್‌ ಸ್ಪರ್ಧಿಗಳು</p></div>

ಭಾರತದ ರೋಯಿಂಗ್‌ ಸ್ಪರ್ಧಿಗಳು

   

ಹಾಂಗ್‌ಝೌ: ಏಷ್ಯನ್ ಗೇಮ್ಸ್‌ನ ಪುರುಷರ ರೋಯಿಂಗ್ ಫೈನಲ್‌ನಲ್ಲಿ ಭಾರತ ತಂಡ ಕಂಚಿನ ಪದಕ ಜಯಿಸಿದೆ.

ಜಸ್ವಿಂದರ್ ಸಿಂಗ್, ಭೀಮ್ ಸಿಂಗ್, ಪುನೀತ್ ಕುಮಾರ್, ಆಶಿಶ್ ಕುಮಾರ್ ಅವರನ್ನು ಒಳಗೊಂಡ ಭಾರತದ ರೋಯಿಂಗ್ ತಂಡ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ.

ADVERTISEMENT

ಭಾರತ ತಂಡ 6:10.81 ಸೆಕೆಂಡ್‌ನಲ್ಲಿ ಗುರಿ ತಲುಪಿ ಕಂಚಿನ ಪದಕ ತನ್ನದಾಗಿಸಿಕೊಂಡಿತು. ಚೀನಾ 6:10.04 ಸೆಕೆಂಡ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡರೆ, ಉಜ್ಬೇಕಿಸ್ತಾನ್ 6:04.96 ಸೆಕೆಂಡ್‌ನಲ್ಲಿ ಬೆಳ್ಳಿ ಪದಕ ತನ್ನದಾಗಿಸಿಕೊಂಡಿತು.

ಪುರುಷರ ಸಿಂಗಲ್ಸ್ ಸ್ಕಲ್ಸ್ ಸ್ಪರ್ಧೆಯ ಫೈನಲ್‌ನಲ್ಲಿ ಭಾರತದ ರೋವರ್ ಬಲರಾಜ್ ಪನ್ವಾರ್ ನಾಲ್ಕನೇ ಸ್ಥಾನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.