
ನವದೆಹಲಿ: ಭಾರತ ಮಹಿಳಾ ಹಾಕಿ ತಂಡದ ಮುಖ್ಯ ಕೋಚ್ ಹರೇಂದ್ರ ಸಿಂಗ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
2021ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದ ಸಂದರ್ಭದಲ್ಲಿ ಭಾರತ ಮಹಿಳಾ ತಂಡದ ಮುಖ್ಯ ಕೋಚ್ ಆಗಿದ್ದ ಡಚ್‌ನ ಸ್ಜೋರ್ಡ್ ಮಾರಿಜ್ನೆ ಅವರು ಹರೇಂದ್ರ ಅವರಿಂದ ತೆರವಾದ ಸ್ಥಾನಕ್ಕೆ ಮರಳಬಹುದು ಎಂದು ಮೂಲಗಳು ತಿಳಿಸಿವೆ. ಮರಿಜ್ನೆ ಅವರು 2021ರ ಆಗಸ್ಟ್‌ನಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.
ಈ ಹಿಂದೆ ಯುನೈಟೆಡ್ ಸ್ಟೇಟ್ಸ್ ಪುರುಷರ ಹಾಕಿ ತಂಡದ ಕೋಚ್ ಆಗಿದ್ದ ಹರೇಂದ್ರ ಅವರು 2024ರ ಏಪ್ರಿಲ್‌ನಲ್ಲಿ ಭಾರತ ತಂಡದ ಮುಖ್ಯ ಕೋಚ್ ಹುದ್ದೆಯನ್ನು ವಹಿಸಿಕೊಂಡಿದ್ದರು. ಅವರು ಸೋಮವಾರ ಹಾಕಿ ಇಂಡಿಯಾಕ್ಕೆ ಇ-ಮೇಲ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಕಳೆದ ವರ್ಷದಿಂದ ಭಾರತ ಮಹಿಳಾ ಹಾಕಿ ತಂಡದ ಪ್ರದರ್ಶನ ನಿರಾಶಾದಾಯಕವಾಗಿದೆ. 2024-25ರ ಎಫ್‌ಐಎಚ್ ಪ್ರೊ ಲೀಗ್‌ನಲ್ಲಿ ತಂಡವು 16 ಪಂದ್ಯಗಳಲ್ಲಿ ಕೇವಲ ಎರಡು ಗೆಲುವುಗಳನ್ನು ದಾಖಲಿಸಿದೆ. ಅಲ್ಲದೆ, ಮುಂದಿನ ಋತುವಿಗೆ ಅರ್ಹತೆ ಪಡೆಯಲು ವಿಫಲವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.