ADVERTISEMENT

ಖೇಲ್‌ ರತ್ನಗೆ ಹೀನಾ, ಅಂಕುರ್‌ ಹೆಸರು ಶಿಫಾರಸು

ಪಿಟಿಐ
Published 29 ಏಪ್ರಿಲ್ 2019, 12:08 IST
Last Updated 29 ಏಪ್ರಿಲ್ 2019, 12:08 IST
ಹೀನಾ ಸಿಧು 
ಹೀನಾ ಸಿಧು    

ನವದೆಹಲಿ: ರಾಜೀವ್ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗೆ ಶೂಟರ್‌ಗಳಾದ ಹೀನಾ ಸಿಧು ಮತ್ತು ಅಂಕುರ್‌ ಮಿತ್ತಲ್‌ ಹೆಸರನ್ನು ರಾಷ್ಟ್ರೀಯ ಶೂಟಿಂಗ್‌ ಒಕ್ಕೂಟ ಶಿಫಾರಸು ಮಾಡಿದೆ.

ಸೋಮವಾರ ನಡೆದ ಒಕ್ಕೂಟದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದು, ಅರ್ಜುನ ಪ್ರಶಸ್ತಿಗೆ ಅಂಜುಮ್‌ ಮುದ್ಗೀಳ್, ಶಾಹಜಾರ್‌ ರಿಜ್ವಿ, ಓಂ ಪ್ರಕಾಶ್ ಮಿಠರ್‌ವಾಲ್‌ ಅವರ ಹೆಸರನ್ನೂ ಸೂಚಿಸಿದೆ.

ಐಎಸ್‌ಎಸ್‌ಎಫ್ ಶೂಟಿಂಗ್‌ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದ ಭಾರತದ ಶೂಟರ್ ಎಂಬ ಗೌರವಕ್ಕೆ ಭಾಜನರಾದ ಹೀನಾ ಸಿಧು, ವಿಶ್ವಕಪ್‌, ಕಾಮನ್‌ವೆಲ್ತ್‌ ಗೇಮ್ಸ್ ಮತ್ತು ಏಷ್ಯನ್‌ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದಿದ್ದರು. ಅಂಕುರ್‌ ಮಿತ್ತಲ್‌ ವಿಶ್ವಕಪ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ಪದಕ ಜಯಿಸಿದ್ದರು.

ADVERTISEMENT

ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಅಂಜುಮ್‌ ಮೋದ್ಗೀಲ್‌ ಚಿನ್ನ ಗೆದ್ದುಟೋಕಿಯೋ ಒಲಿಂಪಿಕ್ಸ್‌ಗೆ ಸ್ಥಾನ ಗಿಟ್ಟಿಸಿದ್ದರೆ,ವಿಶ್ವಕಪ್‌ನಲ್ಲಿ ಶಾಹಜಾರ್‌ ರಿಜ್ವಿ ಚಿನ್ನಕ್ಕೆ ಕೊರಳೊಡ್ಡಿದ್ದರು. ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ 23 ವರ್ಷದಓಂ ಪ್ರಕಾಶ್ ಮಿಠರ್‌ವಾಲ್‌ಚಿನ್ನ ಗೆದ್ದ ಸಾಧನೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.