
ಪ್ರಜಾವಾಣಿ ವಾರ್ತೆ
ಕ್ರೀಡಾಕೂಟ
ಬೆಂಗಳೂರು: ನಗರದ ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿನಿ ಡಿ.ಎಸ್.ಹಿಮಪೂರ್ವಿ ಅವರು ಲಖನೌದ ರಾಮ ಮನೋಹರ ಲೋಹಿಯಾ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆದ ಅಂತರ ಕಾನೂನು ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಸಹಿತ ನಾಲ್ಕು ಪದಕಗಳನ್ನು ಗೆದ್ದುಕೊಂಡಿದ್ದಾರೆ.
ಶನಿವಾರ ಮುಕ್ತಾಯಗೊಂಡ ಈ ಕೂಟದ ಲಾಂಗ್‌ಜಂಪ್‌ನಲ್ಲಿ 4.61 ಮೀ. ದೂರ ಜಿಗಿದು ಚಿನ್ನ ಗೆದ್ದ ಅವರು, 100 ಮೀ. (13.46 ಸೆ.) ಮತ್ತು 200 ಮೀ. ಓಟದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡರು. ರಿಲೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡರು.
ಥ್ರೋಬಾಲ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಕ್ರೈಸ್ಟ್ ಕಾಲೇಜು ತಂಡದಲ್ಲಿ ಆಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.