
ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ, ಚಿರಾಗ್ ಶೆಟ್ಟಿ
ಹಾಂಗ್‌ಕಾಂಗ್: ಹಾಂಗ್‌ಕಾಂಗ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಅಗ್ರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ.
ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಭಾವಿ ಪ್ರದರ್ಶನ ಮುಂದುವರಿಸಿದ ವಿಶ್ವ ಕ್ರಮಾಂಕದಲ್ಲಿ ಒಂಬತ್ತನೇ ಸ್ಥಾನದಲ್ಲಿರುವ ಸಾತ್ವಿಕ್-ಚಿರಾಗ್, ಮೂರು ಸೆಟ್‌ಗಳ ಹೋರಾಟದ ಅಂತಿಮದಲ್ಲಿ ಗೆಲುವು ಸಾಧಿಸಿದ್ದಾರೆ.
64 ನಿಮಿಷಗಳವರೆಗೆ ಸಾಗಿದ ಪಂದ್ಯದಲ್ಲಿ ಭಾರತೀಯ ಜೋಡಿ, ಮಲೇಷ್ಯಾದ ಆರಿಫ್ ಜುನೈದಿ ಹಾಗೂ ರಾಯ್ ಕಿಂಗ್ ಯಾಪ್ ವಿರುದ್ಧ 21-14, 20-22, 21-16ರ ಅಂತರದಲ್ಲಿ ಪಂದ್ಯವನ್ನು ವಶಪಡಿಸಿಕೊಂಡಿತು.
ಇತ್ತೀಚೆಗಷ್ಟೇ ನಡೆದ ಬಿಡಬ್ಲ್ಯು ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಸಾತ್ವಿಕ್-ಚಿರಾಗ್ ಕಂಚಿನ ಪದಕ ಗೆದ್ದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.