ನವದೆಹಲಿ: ಭಾರತದ ಟೇಬಲ್ ಟೆನಿಸ್ ಒಕ್ಕೂಟ (ಟಿಟಿಎಫ್‌ಐ) 2024ರ ವಿಶ್ವ ಟೇಬಲ್ ಚಾಂಪಿಯನ್‌ಷಿಪ್‌ನ ಆತಿಥ್ಯಕ್ಕೆ ಬಿಡ್ ಮಾಡಿದೆ.
ಹಂಗರಿಯ ಬುಡಾಪೆಸ್ಟ್‌ನಲ್ಲಿ ನಡೆದ ಚಾಂಪಿಯನ್‌ಷಿಪ್‌ನ ಅಂತಿಮ ದಿನ ಒಕ್ಕೂಟದ ಕಾರ್ಯದರ್ಶಿ ಎಂ.ಪಿ.ಸಿಂಗ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತವು 1987ರಲ್ಲಿ ಆತಿಥ್ಯ ವಹಿಸಿತ್ತು. ಅಲ್ಲದೆ,ಐಐಟಿಎಫ್ ವಿಶ್ವ ಜೂನಿಯರ್ ಟೇಬಲ್ ಟೆನಿಸ್ ಚಾಂಪಿಯನ್‌ಷಿಪ್ 2012ರಲ್ಲಿ ಹೈದರಾಬಾದ್‌ನಲ್ಲಿ ಆಯೋಜಿಸಲಾಗಿತ್ತು. ಇದೀಗ2024ರ ಚಾಂಪಿಯನ್‌ಷಿಪ್ ಆತಿಥ್ಯ ವಹಿಸಲು ಬಿಡ್ ಮಾಡುತ್ತಿದ್ದೇವೆ ಎಂದು ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
ಅರ್ಜುನ ಪ್ರಶಸ್ತಿಗೆ ಹರ್ಮೀತ್ ದೇಸಾಯಿ, ಸುನಿಲ್ ಶೆಟ್ಟಿ ಮತ್ತು ಮಧುರಿಕಾ ಪಟ್ಕರ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.