ಸೊಲೊ (ಇಂಡೊನೇಷ್ಯಾ): ಬ್ಯಾಡ್ಮಿಂಟನ್ ಏಷ್ಯಾ ಜೂನಿಯರ್ ಮಿಶ್ರ ತಂಡ ಚಾಂಪಿಯನ್‌ಷಿಪ್‌ನಲ್ಲಿ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತ ತಂಡ ಸೋಮವಾರ ವೀರೋಚಿತ ಹೋರಾಟ ನೀಡಿದರೂ ಅಂತಿಮವಾಗಿ ಜಪಾನ್ ಎದುರು 104–110 ರಿಂದ ಸೋಲೊಪ್ಪಿಕೊಂಡಿತು.
ರಿಲೇ ಸ್ಕೋರಿಂಗ್ ಮಾದರಿಯಲ್ಲಿ ನಡೆಯುವ ಈ ಪಂದ್ಯದ ಬಹುತೇಕ ಸಮಯ ಭಾರತ ಮುನ್ನಡೆಯಲ್ಲಿತ್ತು. ಆದರೆ, 2023ರ ಚಾಂಪಿಯನ್ ತಂಡವಾದ ಜಪಾನ್ ಕೊನೆಯ ಐದು ಪಂದ್ಯಗಳನ್ನು ಸತತವಾಗಿ ಜಯಿಸಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು.
ಭಾರತ ‘ಡಿ’ ಗುಂಪಿನಲ್ಲಿ ಅಗ್ರಸ್ಥಾನ ಗಳಿಸಿ ಕ್ವಾರ್ಟರ್‌ಫೈನಲ್‌ಗೆ ಅರ್ಹತೆ ಪಡೆದಿತ್ತು.
ಜುಲೈ 23 ರಿಂದ ವೈಯಕ್ತಿಕ ಚಾಂಪಿಯನ್‌ಷಿಪ್ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.