ಕಠ್ಮಂಡು: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ದಕ್ಷಿಣ ಏಷ್ಯನ್ ಕ್ರೀಡಾಕೂಟದ ಪುರುಷರ ವಾಲಿಬಾಲ್ ಸ್ಪರ್ಧೆಯ ಫೈನಲ್‌ನಲ್ಲಿ ಪೈಪೋಟಿ ನಡೆಸಲಿವೆ.
ಭಾನುವಾರ ನಡೆದ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಭಾರತ 27–25, 25–19, 21–25, 25–21ರಲ್ಲಿ ಶ್ರೀಲಂಕಾವನ್ನು ಮಣಿಸಿತು.
ನಾಲ್ಕರ ಘಟ್ಟದ ಇನ್ನೊಂದು ಹಣಾಹಣಿಯಲ್ಲಿ ಪಾಕಿಸ್ತಾನ 25–15, 25–21, 26–24ರಲ್ಲಿ ಬಾಂಗ್ಲಾದೇಶದ ವಿರುದ್ಧ ಗೆದ್ದಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.