ಪ್ರಾತಿನಿಧಿಕ ಚಿತ್ರ
ನವದೆಹಲಿ: 2025ರ ಪ್ಯಾರಾ ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್‌ಷಿಪ್ ನವದೆಹಲಿಯಲ್ಲಿ ನಡೆಯಲಿದೆ ಎಂದು ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಸಂಸ್ಥೆ ಗುರುವಾರ ತಿಳಿಸಿದೆ.
ಇದೇ ಮೊದಲ ಬಾರಿ ಕ್ರೀಡಾಕೂಟಕ್ಕೆ ಭಾರತವು ಆತಿಥ್ಯ ವಹಿಸಲಿದೆ. ಮುಂದಿನ ವರ್ಷ ಸೆಪ್ಟೆಂಬರ್ 26 ಮತ್ತು ಅಕ್ಟೋಬರ್ 5ರ ನಡುವೆ ನವದೆಹಲಿಯ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಕೂಟ ನಡೆ ಯಲಿದೆ.
12ನೇ ಆವೃತ್ತಿ ಇದಾಗಿದ್ದು, ಏಷ್ಯಾದಲ್ಲಿ ನಾಲ್ಕನೇ ಬಾರಿಗೆ ನಡೆಯು ತ್ತಿದೆ. 100ಕ್ಕೂ ಹೆಚ್ಚು ರಾಷ್ಟ್ರಗಳಿಂದ ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.