
ಪಿಟಿಐ
ರಿಫಾ, ಬಹರೇನ್ : ಭಾರತದ ಪುರುಷರ ಮತ್ತು ಮಹಿಳೆಯರ ತಂಡಗಳು ಗುರುವಾರ ಏಷ್ಯನ್ ಯೂತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡವು.
ಭಾರತ ಎರಡು ಚಿನ್ನ, ಮೂರು ಬೆಳ್ಳಿ ಮತ್ತು ಐದು ಕಂಚು ಗೆದ್ದು ಪದಕ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಚೀನಾ ಆರು ಚಿನ್ನ, 10 ಬೆಳ್ಳಿ ಮತ್ತು ಒಂದು ಕಂಚಿನೊಂದಿಗೆ ಅಗ್ರಸ್ಥಾನದಲ್ಲಿದೆ, ನಂತರದಲ್ಲಿ ಥಾಯ್ಲೆಂಡ್, ಉಜ್ಬೇಕಿಸ್ತಾನ ದೇಶಗಳಿವೆ.
ಮಹಿಳೆಯರ ಕಬಡ್ಡಿ ಫೈನಲ್‌ನಲ್ಲಿ ಭಾರತ 75–21ರಿಂದ ಇರಾನ್ ತಂಡವನ್ನು ಮಣಿಸಿತು. ಪುರುಷರ ತಂಡವು 35–32ರಿಂದ ಇರಾನ್ ತಂಡವನ್ನು ಸೋಲಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.