ಆಮ್‌ಸ್ಟೆಲ್ವೀನ್, ನೆದರ್ಲೆಂಡ್ಸ್: ಭಾರತ ಪುರುಷರ ಹಾಕಿ ತಂಡವು ಶನಿವಾರ ಎಫ್‌ಐಎಚ್ ಪ್ರೊ ಲೀಗ್‌ನ ಯುರೋಪಿಯನ್ ಲೆಗ್‌ನ ಮೊದಲ ಪಂದ್ಯದಲ್ಲಿ 1–2 ಗೋಲುಗಳಿಂದ ಒಲಿಂಪಿಕ್ ಚಾಂಪಿಯನ್ ನೆದರ್ಲೆಂಡ್ಸ್ ತಂಡಕ್ಕೆ ಮಣಿಯಿತು.
ನಾಯಕ ಹರ್ಮನ್‌ಪ್ರೀತ್ ಸಿಂಗ್ (19ನೇ ನಿಮಿಷ) ಅವರು ಎರಡನೇ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ಟರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿ ಭಾರತ ತಂಡಕ್ಕೆ ಆರಂಭಿಕ ಮುನ್ನಡೆ ಒದಗಿಸಿದ್ದರು. ಆದರೆ, 25ನೇ ನಿಮಿಷದಲ್ಲಿ ಆತಿಥೇಯ ತಂಡದ ವ್ಯಾನ್ ಡ್ಯಾಮ್ ಥಿಜ್ಸ್ ಅವರು ಚೆಂಡನ್ನು ಗುರಿ ಸೇರಿಸಿದರು. ಹೀಗಾಗಿ, ಉಭಯ ತಂಡಗಳ ಸ್ಕೋರ್ ಸಮಬಲಗೊಂಡಿತು. ಪಂದ್ಯ ಮುಗಿಯಲು ಎರಡು ನಿಮಿಷ ಇರುವಂತೆ ವ್ಯಾನ್ (58ನೇ) ಮತ್ತೊಂದು ಗೋಲು ಗಳಿಸಿದರು.
ಭಾರತ ತಂಡವು ಲೆಗ್‌ನ ಎರಡನೇ ಪಂದ್ಯದಲ್ಲಿ ಸೋಮವಾರ ಮತ್ತೆ ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ.
ವರ್ಷದ ಆರಂಭದಲ್ಲಿ ಭುವನೇಶ್ವರದಲ್ಲಿ ನಡೆದ ಪ್ರೊ ಲೀಗ್‌ನ ತವರು ಲೆಗ್‌ನಲ್ಲಿ ಹರ್ಮನ್‌ಪ್ರೀತ್ ಬಳಗವು ಎಂಟು ಪಂದ್ಯಗಳಲ್ಲಿ ಐದು ಗೆಲುವು ಸಾಧಿಸಿತ್ತು. ಭಾರತ ಒಟ್ಟು 15 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ನೆದರ್ಲೆಂಡ್ಸ್ ತಂಡವು 17 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.