ADVERTISEMENT

ಅಂತರ ವಿವಿ ಅಥ್ಲೆಟಿಕ್ಸ್‌ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2018, 20:15 IST
Last Updated 22 ನವೆಂಬರ್ 2018, 20:15 IST

ಮಂಗಳೂರು: ಮೂಡುಬಿದಿರೆಯಲ್ಲಿ ಇದೇ 24ರಿಂದ 28ವರೆಗೆ ನಡೆಯುವ ಅಖಿಲ ಭಾರತ 79ನೇ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್‌ನಲ್ಲಿ 300ಕ್ಕೂ ಹೆಚ್ಚಿನ ವಿವಿಗಳ 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಕಿಶೋರ್ ಕುಮಾರ್‌ ಸಿ.ಕೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಂಗಳೂರು ವಿಶ್ವವಿದ್ಯಾಲಯ ಹಾಗೂ ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ ಆಳ್ವ ಮಾತನಾಡಿ ‘ಉದ್ಘಾಟನೆಗೂ ಮುನ್ನ ಮೆರವಣಿಗೆ ನಡೆಯಲಿದ್ದು, ಕಲೆ, ಸಂಸ್ಕೃತಿ ಬಿಂಬಿಸುವ 79 ತಂಡಗಳು ಪಾಲ್ಗೊಳ್ಳಲಿವೆ. ಪಿ.ಟಿ.ಉಷಾ ಅವರನ್ನು ಗೌರವಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT