ADVERTISEMENT

ಬ್ಯಾಡ್ಮಿಂಟನ್‌: ಜೈನ್‌ ವಿ.ವಿಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 20:51 IST
Last Updated 8 ಜನವರಿ 2026, 20:51 IST
ಬ್ಯಾಡ್ಮಿಂಟನ್‌
ಬ್ಯಾಡ್ಮಿಂಟನ್‌   

ಬೆಂಗಳೂರು: ಜೈನ್‌ ವಿಶ್ವವಿದ್ಯಾಲಯದ ಪುರುಷರ ಬ್ಯಾಡ್ಮಿಂಟನ್‌ ತಂಡವು ಆಂಧ್ರಪ್ರದೇಶದ ಗುಂಟೂರಿನಲ್ಲಿ ಬುಧವಾರ ಮುಕ್ತಾಯಗೊಂಡ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡಿತು.

ಜೈನ್‌ ವಿ.ವಿ ತಂಡವು ಫೈನಲ್‌ ಹಣಾಹಣಿಯಲ್ಲಿ 3–1ರಿಂದ ಆತಿಥೇಯ ಕೆೆೆಎಲ್‌ಇಎಫ್‌ ವಿಶ್ವವಿದ್ಯಾಲಯ ತಂಡವನ್ನು ಮಣಿಸಿತು. ಅದರೊಂದಿಗೆ, ಅಖಿಲ ಭಾರತ ವಿಶ್ವವಿದ್ಯಾಲಯ ಚಾಂಪಿಯನ್‌ಷಿಪ್‌ ಹಾಗೂ ‘ಖೇಲೊ ಇಂಡಿಯಾ’ ವಿಶ್ವವಿದ್ಯಾಲಯ ಗೇಮ್ಸ್‌ಗೆ ಅರ್ಹತೆ ಪಡೆದುಕೊಂಡಿತು.

ಚೆನ್ನೈನ ಎಸ್‌ಆರ್‌ಎಂ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್ ಆ್ಯಂಡ್‌ ಟೆಕ್ನಾಲಜಿ ಹಾಗೂ ಕೇರಳದ ಕ್ಯಾಲಿಕಟ್‌ ವಿಶ್ವವಿದ್ಯಾಲಯ ತಂಡಗಳು ಕ್ರಮವಾಗಿ ತೃತೀಯ ಮತ್ತು ನಾಲ್ಕನೇ ಸ್ಥಾನವನ್ನು ಪಡೆದುಕೊಂಡವು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.