ADVERTISEMENT

ಜಾವೆಲಿನ್‌ ಥ್ರೋ: ವಿದ್ಯಾರ್ಥಿ ತಲೆ ಹೊಕ್ಕ ಭರ್ಚಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 4:57 IST
Last Updated 28 ಆಗಸ್ಟ್ 2022, 4:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಧುಗಿರಿ: ಪಟ್ಟಣದ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯುತ್ತಿದ್ದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಅಭ್ಯಾಸ ನಿರತನಾಗಿದ್ದ ವಿದ್ಯಾರ್ಥಿ ಎಸೆದ ಜಾವೆಲಿನ್‌ (ಭರ್ಚಿ) ಅಲ್ಲಿಯೇ ಇದ್ದ ವಿದ್ಯಾರ್ಥಿಯೊಬ್ಬನ ತಲೆಗೆ ಹೊಕ್ಕಿದೆ.

ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಇಂದ್ರೇಶ್‌ನನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ಮಧುಗಿರಿಯ ಜೂಪಿಟರ್ ಪಬ್ಲಿಕ್ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ.

ಕ್ರೀಡಾಂಗಣದಲ್ಲಿ ಭರ್ಚಿ ಎಸೆತದ (ಜಾವೆಲಿನ್ ಥ್ರೋ) ತರಬೇತಿ ಪಡೆಯುತ್ತಿದ್ದ ಕಾರ್ಡಿಯಲ್ ಶಾಲೆಯ ವಿದ್ಯಾರ್ಥಿ ವೇಗವಾಗಿ ಎಸೆದ ಭರ್ಚಿ, ಬೆನ್ನು ತಿರುಗಿಸಿಕೊಂಡು ಕುಳಿತಿದ್ದ ಇಂದ್ರೇಶ್ ತಲೆಗೆ ಹೊಕ್ಕಿದೆ. ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಪ್ರಜ್ಞೆ ತಪ್ಪಿದ. ತಕ್ಷಣ ದೈಹಿಕ ಶಿಕ್ಷಣ ಶಿಕ್ಷಕ ಪ್ರತಾಪ್ ಹಾಗೂ ಇತರ ವಿದ್ಯಾರ್ಥಿಗಳು ಆತನನ್ನು ತಾಲ್ಲೂಕು ಆಸ್ಪತ್ರೆಗೆ ಕೊರೆದೊಯ್ದು ಚಿಕಿತ್ಸೆ ಕೊಡಿಸಿದರು. ವೈದ್ಯರ ಸೂಚನೆಯಂತೆ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಕರೆದೊಯ್ಯಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.