ADVERTISEMENT

ಜೋಯ್ಲಿನ್‌ ಜಿಗಿತ!

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2019, 20:32 IST
Last Updated 10 ಸೆಪ್ಟೆಂಬರ್ 2019, 20:32 IST
Joeal
Joeal   

ಶಿರ್ತಾಡಿಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿ, ತನ್ನ ಪ್ರೌಢಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಬೆಂಗಳೂರಿ
ನಲ್ಲಿ ಮುಗಿಸಿದ ಜೋಯ್ಲಿನ್‌ ಅವರು ಮುಂದಿನ ವಿದ್ಯಾಭ್ಯಾಸಕ್ಕೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸೇರಿದರು. ಪ್ರಸ್ತುತ ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ವ್ಯಾಸಂಗ ಪಡೆಯುತ್ತಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆಯೊಂದಿಗೆ ಈಗ ಅವರು ಭಾರತೀಯ ಜೀವ ವಿಮಾ ನಿಗಮ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಬಾಲ್ಯದಿಂದಲೇ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಬೆಳೆಸಿಕೊಂಡಿದ್ದ ಜೋಯ್ಲಿನ್, ಆ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ, ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂಬ ಕನಸು ಕಂಡಿದ್ದರು. ಕನಸುಕಾಣುವುದರ ಜತೆಗೆ ಕಠಿಣ ಪರಿಶ್ರಮ ಹಾಗೂ ಛಲದಿಂದ ಮುನ್ನುಗ್ಗಿ ತಮ್ಮ ಕನಸನ್ನು ನನಸಾಗಿಸಿಕೊಂಡವರು.

2006ರಲ್ಲಿ ಮುಂಬೈನಲ್ಲಿ ನಡೆದ ನ್ಯಾಷನಲ್ ಸ್ಕೂಲ್ ಗೇಮ್ಸ್‌ನಲ್ಲಿ ಕಂಚಿನ ಪದಕವನ್ನು ಗಳಿಸಿದರು. 2007ರಲ್ಲಿ ಆಂಧ್ರ ಪ್ರದೇಶದಲ್ಲಿ ನಡೆದ 19ನೇ ನ್ಯಾಷನಲ್ ಇಂಟರ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಎತ್ತರ ಜಿಗಿತ ಮತ್ತು ಪೆಂಟಾಥ್ಲಾನ್‌ನಲ್ಲಿ ಬೆಳ್ಳಿಯ ಪದಕ ಗಳಿಸಿದರು. ಅದೇ ವರ್ಷ ಚೆನ್ನೈನಲ್ಲಿ ನಡೆದ 19ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಪೆಂಟಾಥ್ಲಾನ್‌ನಲ್ಲಿ ಬೆಳ್ಳಿಯ ಸಾಧನೆಯನ್ನು ಮಾಡಿದ್ದಾರೆ. 2008ರಲ್ಲಿ ಮೈಸೂರಿನಲ್ಲಿ ನಡೆದ 24ನೇ ನ್ಯಾಷನಲ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ ಪದಕ ಗಳಿಸಿಕೊಂಡಿದ್ದಾರೆ.

ADVERTISEMENT

2009ರಲ್ಲಿ ಕೊಚ್ಚಿಯಲ್ಲಿ ನಡೆದ 54ನೇ ನ್ಯಾಷನಲ್ ಸ್ಕೂಲ್ ಗೇಮ್ಸ್‌ನಲ್ಲಿ ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ ಪದಕ, ಅದೇ ವರ್ಷ ಕೊಚ್ಚಿ
ಯಲ್ಲಿ ನಡೆದ 21ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಹಾಗೂ ಚಂಡೀಗಢದಲ್ಲಿ ನಡೆದ 21ನೇ ನ್ಯಾಷನಲ್ ಇಂಟರ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಎತ್ತರ ಜಿಗಿತದಲ್ಲಿ ಬೆಳ್ಳಿ ಮತ್ತು ಟ್ರಿಪಲ್ ಜಂಪ್‌ನಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.

2010ರಲ್ಲಿ ರಾಂಚಿಯಲ್ಲಿ ನಡೆದ 15ನೇ ಫೆಡರೇಷನ್ ಕಪ್ ನ್ಯಾಷನಲ್ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ ಪದಕ, ಕೊಚ್ಚಿಯಲ್ಲಿ ನಡೆದ 50ನೇ ಓಪನ್ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ,ಅದೇ ವರ್ಷ ಬೆಂಗಳೂರಿನಲ್ಲಿ ನಡೆದ 26ನೇ ನ್ಯಾಷನಲ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಪಿಪ್‌ನಲ್ಲಿ ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ ಪದಕವನ್ನು ಗಳಿಸಿಕೊಂಡಿದ್ದಾರೆ. ಅದೇ ವರ್ಷ ವಿಯೆಟ್ನಾಂನಲ್ಲಿ ನಡೆದ 14ನೇ ಏಷ್ಯನ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿ ಆರನೇ ಸ್ಥಾನವನ್ನು ಪಡೆದರು. 2011ರಲ್ಲಿ ಮೂಡುಬಿದಿರೆಯಲ್ಲಿ ನಡೆದ ಅಖಿಲ ಭಾರತ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ, ಹೈದರಾಬಾದ್‌ನಲ್ಲಿ ನಡೆದ 23ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಪಡೆದ ಹೆಗ್ಗಳಿಕೆ ಇವರದ್ದು.

2014ರಲ್ಲಿ ಲಖನೌದಲ್ಲಿ ನಡೆದ 54ನೇ ನ್ಯಾಷನಲ್ ಇಂಟರ್‌ಸ್ಟೇಟ್ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕವನ್ನು ಗಳಿಸಿದರು. 2015ರಲ್ಲಿ ಮಂಗಳೂರಿನಲ್ಲಿ ನಡೆದ 19ನೇ ಫೆಡರೇಷನ್ ಕಪ್ ನ್ಯಾಷನಲ್ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕಕ್ಕೆ ಭಾಜನ
ರಾಗಿದ್ದಾರೆ. 2017ರಲ್ಲಿ ಪಾಟಿಯಾಲದಲ್ಲಿ ನಡೆದ 21ನೇ ಫೆಡರೇಷನ್ ಕಪ್ ನ್ಯಾಷನಲ್ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿ
ಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ, ಅದೇ ವರ್ಷ ಗುಂಟೂರಿನಲ್ಲಿ ನಡೆದ 57ನೇ ನ್ಯಾಷನಲ್ ಇಂಟರ್‌ಸ್ಟೇಟ್ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ, ಅದೇ ವರ್ಷ ಭುವನೇಶ್ವರದಲ್ಲಿ ನಡೆದ 22ನೇ ಏಷ್ಯನ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿ 7ನೇ ಸ್ಥಾನಕ್ಕೆ ಭಾಜನರಾಗಿದ್ದಾರೆ. 2019ರಲ್ಲಿ ಪಾಟಿಯಾಲದಲ್ಲಿ ನಡೆದ 23ನೇ ಫೆಡೆರೇಷನ್ ಕಪ್ ನ್ಯಾಷನಲ್ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿದ್ದಾರೆ.

‘ಕ್ರೀಡೆ ಮೇಲೆ ಇದ್ದಂತಹ ಅದಮ್ಯ ಗೌರವ, ಆಸಕ್ತಿ ಮತ್ತು ಕಠಿಣ ಪರಿಶ್ರಮವೇ ಈ ಕ್ಷೇತ್ರದಲ್ಲಿನ ನನ್ನ ಸಾಧನೆಗೆ ಕಾರಣ’ ಎಂದು ಖುಷಿಯಿಂದ ಹೇಳುತ್ತಾರೆ ಜೋಯ್ಲಿನ್ ಮುರಲ್ ಲೋಬೊ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.