ADVERTISEMENT

ಜೂನಿಯರ್ ಕಬಡ್ಡಿ ವಿಶ್ವಕಪ್‌ ಟೂರ್ನಿ: ರೋಹಿತ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 19:44 IST
Last Updated 21 ಸೆಪ್ಟೆಂಬರ್ 2019, 19:44 IST
ರೋಹಿತ್‌
ರೋಹಿತ್‌   

ಕುಮಟಾ: ಇಲ್ಲಿನ ರೋಹಿತ್ ನಾಯ್ಕ ಥಾಯ್ಲೆಂಡ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಜೂನಿಯರ್ ಕಬಡ್ಡಿ ವಿಶ್ವಕಪ್‌ ಟೂರ್ನಿಯಲ್ಲಿ ಆಡುವ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

ರೋಹಿತ್ ಅವರು ಬಾಳಿಗಾ ಕಲಾ– ವಿಜ್ಞಾನ ಪದವಿಪೂರ್ವ ಕಾಲೇ ಜಿನ ಪ್ರಥಮ ಪಿಯು ವಿದ್ಯಾರ್ಥಿ.17 ವರ್ಷ ವಯಸ್ಸಿನೊಳಗಿನ ಮೂರನೇ ವಿಶ್ವಕಪ್ ಕಬಡ್ಡಿಟೂರ್ನಿಯಲ್ಲಿ ಅವರು ಆಡಲಿದ್ದಾರೆ.

ಜುಲೈ 23, 24ರಂದು ಉತ್ತರ ಪ್ರದೇಶದಲ್ಲಿ ನಡೆದಿದ್ದ ರಾಜೀವ್ ಗಾಂಧಿ ರಾಷ್ಟ್ರೀಯ ಜೂನಿಯರ್ ಕಬಡ್ಡಿ ಟೂರ್ನಿಯಲ್ಲಿ ಉತ್ತಮವಾಗಿ ಆಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.