
ಪಿಟಿಐವಿಶ್ವಕಪ್ ಕಬಡ್ಡಿ ಟೂರ್ನಿ ಗೆದ್ದ ಭಾರತದ ವನಿತೆಯರು
ಢಾಕಾ: ವಿಶ್ವಕಪ್ ಕಬಡ್ಡಿ ಟೂರ್ನಿಯಲ್ಲಿ ಭಾರತೀಯ ಮಹಿಳಾ ತಂಡ ಚೈನೀಸ್ ತೈಪೆ ವಿರುದ್ಧ 35–28 ಅಂತರದಿಂದ ಜಯಗಳಿಸಿ ಸತತ ಎರಡನೇ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
11 ದೇಶಗಳು ಭಾಗವಹಿಸಿದ್ದ ಪಂದ್ಯಾವಳಿಯಲ್ಲಿ ಭಾರತ ಅಗ್ರಸ್ಥಾನದಲ್ಲಿ ಹೊರಹೊಮ್ಮಿತು.
ಮಹಿಳಾ ಮಣಿಗಳ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಹಲವರು ಅಭಿನಂದಿಸಿದ್ದಾರೆ.
ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡದ್ದ ಬಾರತ ತಂಡ, 33–21ರ ಅಂತರದಲ್ಲಿ ಇರಾನ್ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಇನ್ನೊಂದೆಡೆ ಚೈನೀಸ್ ತೈಪೆ ಸೆಮಿಫೈನಲ್‌ನಲ್ಲಿ ಆತಿಥೇಯ ಬಾಂಗ್ಲಾದೇಶವನ್ನು 25-18 ಅಂತರದಿಂದ ಸೋಲಿಸಿ ಫೈನಲ್‌ಗೆ ತಲುಪಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.