ADVERTISEMENT

ಕೆಎಎಗೆ ಅಶ್ವತ್ಥನಾರಾಯಣ ಅಧ್ಯಕ್ಷ ?

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 19:45 IST
Last Updated 21 ಜನವರಿ 2020, 19:45 IST
ಸಿ.ಎನ್.ಅಶ್ವತ್ಥನಾರಾಯಣ
ಸಿ.ಎನ್.ಅಶ್ವತ್ಥನಾರಾಯಣ   

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಕರ್ನಾಟಕ ಅಥ್ಲೆಟಿಕ್ಸ್‌ ಸಂಸ್ಥೆಯ (ಕೆಎಎ) ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಕ್ಯಾನ್ಸರ್‌ನಿಂದ ಬಳಲುತ್ತಿರುವ ಕಾರಣ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುತ್ತಪ್ಪ ರೈ ಹೇಳಿದ್ದಾರೆ. ಅವರಿಂದ ತೆರವಾಗುವ ಸ್ಥಾನಕ್ಕೆ ಅಶ್ವತ್ಥನಾರಾಯಣ ಅವರು ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

‘ಶೀಘ್ರವೇ ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ. ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ತೀರ್ಮಾನಿಸಿದ್ದೇವೆ. ಕಾನೂನು ಪ್ರಕಾರವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಧ್ಯಕ್ಷರಾದವರು ನಾಲ್ಕು ವರ್ಷ ಅಧಿಕಾರದಲ್ಲಿರಲಿದ್ದಾರೆ. ರೈ ಅವರು ಒಂದು ವರ್ಷ ಮೂರು ತಿಂಗಳು ಕಾರ್ಯನಿರ್ವಹಿಸಿದ್ದು ಉಳಿದ ಅವಧಿಯಲ್ಲಿ ಅಶ್ವತ್ಥನಾರಾಯಣ ಅವರು ಈ ಜವಾಬ್ದಾರಿ ನಿಭಾಯಿಸಲಿದ್ದಾರೆ’ ಎಂದು ಕೆಎಎ ಕಾರ್ಯದರ್ಶಿ ಎ.ರಾಜವೇಲು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.