
ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜ್ಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆಯು ಆಯೋಜಿಸಿರುವ ಎ, ಬಿ ಮತ್ತು ಸಿ ಡಿವಿಷನ್ ಲೀಗ್ ಟೂರ್ನಿಗಳ ಪ್ರಶಸ್ತಿ ಸುತ್ತಿನ ಪಂದ್ಯಗಳು ಗುರುವಾರ ನಡೆಯಲಿವೆ. ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ.
ಎಸ್. ರಂಗರಾಜನ್ ಸ್ಮರಣಾರ್ಥ ಟ್ರೋಫಿಗಾಗಿ ನಡೆಯುತ್ತಿರುವ ‘ಸಿ’ ಡಿವಿಷನ್ ಲೀಗ್‌ನ ಫೈನಲ್ ಪಂದ್ಯವು ಬೆಳಿಗ್ಗೆ 11.30ಕ್ಕೆ ಆರಂಭವಾಗಲಿದೆ. ಎಂಇಜಿ ಬ್ಯಾಸ್ಕೆಟ್‌ಬಾಲ್ ಕ್ಲಬ್ ಹಾಗೂ ಎಚ್‌ಬಿಆರ್ ಬ್ಯಾಸ್ಕೆಟ್‌ಬಾಲ್ ಕ್ಲಬ್ ತಂಡಗಳು ಟ್ರೋಫಿಗಾಗಿ ಸೆಣಸಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.