ADVERTISEMENT

ಥ್ರೋಬಾಲ್‌: ಕರ್ನಾಟಕ ತಂಡಗಳಿಗೆ ಚಿನ್ನ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 16:28 IST
Last Updated 30 ಜುಲೈ 2023, 16:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಬೆಂಗಳೂರು: ಕರ್ನಾಟಕದ ಬಾಲಕ ಮತ್ತು ಬಾಲಕಿಯರ ತಂಡದವರು ತಮಿಳುನಾಡಿನ ತಿರುಪುರ್‌ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್‌ ಥ್ರೋಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡರು.

ಭಾನುವಾರ ನಡೆದ ಬಾಲಕರ ವಿಭಾಗದ ಫೈನಲ್‌ನಲ್ಲಿ ಕರ್ನಾಟಕ 25–23, 25–20 ರಿಂದ ಆತಿಥೇಯ ತಮಿಳುನಾಡು ತಂಡವನ್ನು ಮಣಿಸಿತು. ಸೆಮಿಫೈನಲ್‌ನಲ್ಲಿ ರಾಜ್ಯದ ತಂಡ ಮಹಾರಾಷ್ಟ್ರ ವಿರುದ್ಧವೂ, ತಮಿಳುನಾಡು ತಂಡ ತೆಲಂಗಾಣ ಎದುರೂ ಗೆಲುವು ಸಾಧಿಸಿದ್ದವು.

ಬಾಲಕಿಯರ ವಿಭಾಗದ ಫೈನಲ್‌ನಲ್ಲಿ ಕರ್ನಾಟಕ 25–20, 25–18 ರಿಂದ ಆಂಧ್ರಪ್ರದೇಶ ತಂಡವನ್ನು ಸೋಲಿಸಿತು. ಸೆಮಿಫೈನಲ್‌ನಲ್ಲಿ ಇವೆರಡು ತಂಡಗಳು ಕ್ರಮವಾಗಿ ತಮಿಳುನಾಡು ಹಾಗೂ ತೆಲಂಗಾಣ ವಿರುದ್ಧ ಗೆಲುವು ಪಡೆದಿದ್ದವು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.