ADVERTISEMENT

ರಾಜ್ಯ ರ್‍ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿ ಸೆಪ್ಟೆಂಬರ್‌ 25ರಿಂದ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 16:11 IST
Last Updated 12 ಸೆಪ್ಟೆಂಬರ್ 2025, 16:11 IST
   

ಬೆಂಗಳೂರು: ಜಯನಗರ ಟೇಬಲ್‌  ಟೆನಿಸ್‌ ಸಂಸ್ಥೆ ಹಾಗೂ ಬಿ.ಎಂ.ಎಸ್‌ ಕಾಲೇಜು ಜಂಟಿ ಆಶ್ರಯದಲ್ಲಿ ಎಂಟನೇ ಆವೃತ್ತಿಯ ರಾಜ್ಯ ರ್‍ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯನ್ನು ಸೆಪ್ಟೆಂಬರ್‌ 25ರಿಂದ 28ರವರೆಗೆ ಆಯೋಜಿಸಲಾಗಿದೆ.

ಬಸವನಗುಡಿಯಲ್ಲಿರುವ ಬಿ.ಎಂ.ಎಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪಂದ್ಯಗಳು ನಡೆಯಲಿವೆ. 11, 13, 15, 17 ಮತ್ತು 19 ವರ್ಷದೊಳಗಿನ ಬಾಲಕ–ಬಾಲಕಿಯರ ಹಾಗೂ ಪುರುಷ, ಮಹಿಳೆಯರ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧಿಗಳು ಹೆಸರು ನೋಂದಣಿಗೆ https://karnatakatabletennis.web.appಗೆ ಭೇಟಿ ನೀಡಬಹುದು. ಸೆಪ್ಟೆಂಬರ್‌ 20 (ಶನಿವಾರ) ಅಂತಿಮ ದಿನವಾಗಿದೆ. 

ಹೆಚ್ಚಿನ ಮಾಹಿತಿಗೆ ಮೊ. 8217796386 ಅನ್ನು ಸಂಪರ್ಕಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.