ADVERTISEMENT

ವಾಲಿಬಾಲ್‌: ಎಎಲ್‌ವಿ ತಂಡಕ್ಕೆ ಜಯ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 19:17 IST
Last Updated 17 ಸೆಪ್ಟೆಂಬರ್ 2025, 19:17 IST
   

ಬೆಂಗಳೂರು: ಎಎಲ್‌ವಿ ತಂಡವು ರಾಜ್ಯ ಫುಟ್‌ಬಾಲ್‌ ಸಂಸ್ಥೆಯ ಆಶ್ರಯದಲ್ಲಿ ಎ. ಲೋಕೇಶ್‌ ಗೌಡ ಸ್ಮರಣಾರ್ಥ ಟ್ರೋಫಿಗಾಗಿ ನಡೆಯುತ್ತಿರುವ ರಾಜ್ಯ ಸೀನಿಯರ್‌ ವಾಲಿಬಾಲ್‌ ಚಾಂಪಿಯನ್‌ಷಿಪ್‌ನ ಪುರುಷರ ವಿಭಾಗದ ಲೀಗ್‌ ಪಂದ್ಯದಲ್ಲಿ ಬುಧವಾರ 3–0ಯಿಂದ ಎಸ್‌ಎಚ್‌ಬಿ ತಂಡವನ್ನು ಸೋಲಿಸಿತು.

ಕಂಠೀರವ ಕ್ರೀಡಾಂಗಣದಲ್ಲಿ ನಡೆದ ದಿನದ ಮತ್ತೊಂದು ಪಂದ್ಯದಲ್ಲಿ ಎಸ್‌ಡಿಎಂ ತಂಡವು 3–2ರಿಂದ ಪಿಒಎಸ್‌ ವಿರುದ್ಧ ಗೆಲುವು ಸಾಧಿಸಿತು.

ಮಹಿಳೆಯರ ವಿಭಾಗದ ಪಂದ್ಯದಲ್ಲಿ ಪಿಒಎಸ್‌ ತಂಡವು 3–0ಯಿಂದ ಎಂಸಿಸಿ ತಂಡವನ್ನು ಸುಲಭವಾಗಿ ಮಣಿಸಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.