ಬೆಂಗಳೂರು: ಪಿ.ಆರ್.ಪೂವಮ್ಮ, ದಿಶಾ ಎ., ದೀಕ್ಷಿತಾ ಗೌಡ ಹಾಗೂ ಪ್ರಿಯಾ ಮೋಹನ್ ಅವರಿದ್ದ ಕರ್ನಾಟಕ ತಂಡವು ಚೆನ್ನೈನಲ್ಲಿ ಭಾನುವಾರ ಮುಕ್ತಾಯಗೊಂಡ ರಾಷ್ಟ್ರೀಯ ಅಂತರರಾಜ್ಯ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಮಹಿಳೆಯರ 4x400 ಮೀ. ರಿಲೇ ಓಟದಲ್ಲಿ ಚಿನ್ನದ ಪದಕ ಗೆದ್ದುಕೊಂಡಿತು.
ಆದರೆ, ಪುರುಷರ ತಂಡವು ಕಂಚಿನ ಪದಕಕ್ಕೆ ತೃಪ್ತಿಪಡಬೇಕಾಯಿತು.
ಮಹಿಳೆಯರ ಹೈಜಂಪ್‌ನಲ್ಲಿ ಪಲ್ಲವಿ ಪಾಟೀಲ ಹಾಗೂ ಪುರುಷರ ಲಾಂಗ್‌ಜಂಪ್ ಸ್ಪರ್ಧೆಯಲ್ಲಿ ಎಸ್. ಲೋಕೇಶ್ ಬೆಳ್ಳಿ ಪದಕವನ್ನು ಗೆದ್ದುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.