
ಸಾಂಕೇತಿಕ ಚಿತ್ರ
ಬೆಂಗಳೂರು: ರಾಜಸ್ಥಾನದಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ವ್ಯಾಪ್ತಿಯ ಸೇಂಟ್ ಜೋಸೆಫ್ ಕಾಮರ್ಸ್ ಕಾಲೇಜಿನ ವಿದ್ಯಾರ್ಥಿನಿ ನೈಶಾ ಶೆಟ್ಟಿ ನಾಲ್ಕು ರಜತ ಪದಕ ಪಡೆದುಕೊಂಡಿದ್ದಾರೆ.
ಮಹಿಳೆಯರ 100 ಮೀಟರ್ ಬಟರ್ ಫ್ಲೈ, 50 ಮೀಟರ್ ಬಟರ್ ಫ್ಲೈ, 100 ಮೀಟರ್ ಫ್ರೀಸ್ಟೈಲ್ ಮತ್ತು 100 ಮೀಟರ್ ಬ್ಯಾಕ್ ಸ್ಟ್ರೋಕ್ ಈಜು ಸ್ಪರ್ಧೆಗಳಲ್ಲಿ ಈ ಸಾಧನೆ ಮಾಡಿದ್ದಾರೆ.
‘ಫೆನ್ಸಿಂಗ್ ಫಾಯಿಲ್ ಮಹಿಳಾ ತಂಡ ಕಂಚಿನ ಪದಕ ಗಳಿಸಿದೆ. ಉತ್ತಮ ಸಾಧನೆಯ ನಿರೀಕ್ಷೆಯಲ್ಲಿರುವ ಬಿಸಿಯು ಹಾಕಿ ತಂಡ ಸೆಮಿಫೈನಲ್ ಹಂತವನ್ನು ತಲುಪಿದೆ. ಬಿಸಿಯು ಕ್ರೀಡಾ ಸಮನ್ವಯಾಧಿಕಾರಿ ಮಹಮ್ಮದ್ ಸಿಬಗತ್ ಉಲ್ಲಾ ಅವರು 35 ಸದಸ್ಯರ ತಂಡವನ್ನು ಮುನ್ನಡೆಸುತ್ತಿದ್ದಾರೆ’ ಎಂದು ಬಿಸಿಯು ಪ್ರಭಾರ ಕ್ರೀಡಾ ನಿರ್ದೇಶಕ ಕೆ. ಶಿವಶಂಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.