ADVERTISEMENT

ಖೇಲೊ ಇಂಡಿಯಾ: ಉಷಾಗೆ ಚಿನ್ನದ ಪದಕ

​ಪ್ರಜಾವಾಣಿ ವಾರ್ತೆ
Published 25 ಜನವರಿ 2020, 12:48 IST
Last Updated 25 ಜನವರಿ 2020, 12:48 IST
ಖೇಲೊ ಇಂಡಿಯಾ ರಾಷ್ಟ್ರೀಯ ಯೂತ್ ಗೇಮ್ಸ್ ಚಿನ್ನದ ಪದಕ ಪಡೆದ ಎಸ್.ಆರ್.ಉಷಾ (ಮಧ್ಯ ನಿಂತಿರುವವರು)
ಖೇಲೊ ಇಂಡಿಯಾ ರಾಷ್ಟ್ರೀಯ ಯೂತ್ ಗೇಮ್ಸ್ ಚಿನ್ನದ ಪದಕ ಪಡೆದ ಎಸ್.ಆರ್.ಉಷಾ (ಮಧ್ಯ ನಿಂತಿರುವವರು)   

ಸೂಲಿಬೆಲೆ: ಇಲ್ಲಿನ ಬಿ.ಎಂ.ರಮೇಶ್ ಅವರ ಪುತ್ರಿ ಎಸ್.ಆರ್.ಉಷಾ ಖೇಲೊ ಇಂಡಿಯಾ ರಾಷ್ಟ್ರೀಯ ಯೂತ್ ಗೇಮ್ಸ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ, ರಾಷ್ಟ್ರೀಯ ನೂತನ ದಾಖಲೆಯೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ನಡೆದ ಯೂತ್ ಗೇಮ್ಸ್‌ನಲ್ಲಿ, ಮಹಿಳಾ ವಿಭಾಗದಿಂದ 87 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಉಷಾ ರಾಷ್ಟ್ರೀಯ ದಾಖಲೆಯೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. (ಸ್ನಾಚ್‌ನಲ್ಲಿ 74 ಕೆ.ಜಿ, ಕ್ಲೀನ್ ಮತ್ತು ಜರ್ಕ್‌ನಲ್ಲಿ 98 ಕೆ.ಜಿ) ಪ್ರಸ್ತುತ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇವರ ಸಾಧನೆಗೆ ತಂದೆ ರಮೇಶ್ ಮತ್ತು ತಾಯಿ ನಿರ್ಮಲ ಹರ್ಷ ವ್ಯಕ್ತಪಡಿಸಿದ್ದಾರೆ. ಶಾಸಕ ಶರತ್ ಬಚ್ಚೇಗೌಡ, ಪ್ರತಿಭಾ ಶರತ್ ಬಚ್ಚೇಗೌಡ, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ಯುವ ಮುಖಂಡ ಜಿ.ನಾರಾಯಣಗೌಡ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.