ADVERTISEMENT

ಮಾರ್ಚ್‌ನಲ್ಲಿ ಖೇಲೊ ಇಂಡಿಯಾ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 11:45 IST
Last Updated 15 ಜುಲೈ 2021, 11:45 IST
ಖೇಲೊ ಇಂಡಿಯಾ ಕ್ರೀಡಾಕೂಟಕ್ಕೆ ಸಂಬಂಧಿಸಿದ ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು, ಉಪಮುಖ್ಯಮಂತ್ರಿ ಸಿ.ಅಶ್ವತ್ಥನಾರಾಯಣ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ನಾರಾಯಣಗೌಡ, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ  ಶಾಲೀನಿ ರಜನೀಶ್ ಮತ್ತಿತರರು ಪಾಲ್ಗೊಂಡಿದ್ದರು
ಖೇಲೊ ಇಂಡಿಯಾ ಕ್ರೀಡಾಕೂಟಕ್ಕೆ ಸಂಬಂಧಿಸಿದ ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು, ಉಪಮುಖ್ಯಮಂತ್ರಿ ಸಿ.ಅಶ್ವತ್ಥನಾರಾಯಣ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ನಾರಾಯಣಗೌಡ, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ  ಶಾಲೀನಿ ರಜನೀಶ್ ಮತ್ತಿತರರು ಪಾಲ್ಗೊಂಡಿದ್ದರು   

ಬೆಂಗಳೂರು: ವಿಶ್ವವಿದ್ಯಾಲಯ ಮಟ್ಟದ ಖೇಲೊ ಇಂಡಿಯಾ ಕ್ರೀಡಾಕೂಟದ ಎರಡನೇ ಆವೃತ್ತಿಗೆ ಮುಂದಿನ ವರ್ಷ ಮಾರ್ಚ್ ಐದರಂದು ಚಾಲನೆ ಸಿಗಲಿದೆ.

ಉಪಮುಖ್ಯಮಂತ್ರಿ ಸಿ. ಅಶ್ವತ್ಥನಾರಾಯಣ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಅವರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ₹ 40 ಕೋಟಿ ವೆಚ್ಚ ಅಂದಾಜಿಸಲಾಗಿದ್ದು ರಾಜ್ಯ ಸರ್ಕಾರ ₹ 20 ಕೋಟಿ ಅನುದಾನ ನೀಡಲಿದೆ ಎಂದು ಸಚಿವರು ತಿಳಿಸಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿರುವ ಕೂಟ 12 ದಿನ ನಡೆಯಲಿದ್ದು 18 ಸ್ಪರ್ಧೆಗಳು ಇರುತ್ತವೆ. 158 ವಿಶ್ವವಿದ್ಯಾಲಯಗಳಿಂದ 3182 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು ತಾಂತ್ರಿಕ ಅಧಿಕಾರಿಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಆರುಸಾವಿರ ಮಂದಿ ಭಾಗವಹಿಸಲಿದ್ದಾರೆ‌ ಎಂದು ಸಭೆಯಲ್ಲಿ ತಿಳಿಸಲಾಯಿತು.

ADVERTISEMENT

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲೀನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ,ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ ಅಧ್ಯಕ್ಷ ಕೆ.ಗೋವಿಂದರಾಜು, ಖೇಲೊ ಇಂಡಿಯಾದ ಮುಖ್ಯಸ್ಥರು, ರಾಜೀವಗಾಂಧಿ ವಿಶ್ವವಿದ್ಯಾಲಯ ಮತ್ತು ಜೈನ್ ವಿಶ್ವವಿದ್ಯಾಲಯದ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.