ADVERTISEMENT

ಸ್ವಾತಂತ್ರ್ಯ ದಿನಾಚರಣೆ: ಕೊಕ್ಕೊ ವಿಶ್ವಕಪ್ ಗೆದ್ದ ತಂಡಕ್ಕೆ ಕೆಂಪುಕೋಟೆಗೆ ಆಹ್ವಾನ

ಪಿಟಿಐ
Published 14 ಆಗಸ್ಟ್ 2025, 15:47 IST
Last Updated 14 ಆಗಸ್ಟ್ 2025, 15:47 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಚೊಚ್ಚಲ ಕೊಕ್ಕೊ ವಿಶ್ವಕಪ್ ಗೆದ್ದ ಭಾರತದ ಪುರುಷ ಮತ್ತು ಮಹಿಳಾ ತಂಡಗಳ ಆಟಗಾರರನ್ನು ಶುಕ್ರವಾರ ಕೆಂಪುಕೋಟೆಯಲ್ಲಿ ನಡೆಯಲಿರುವ 79ನೇ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. 

2025ರ ಜನವರಿ 13ರಿಂದ 19ರವರೆಗೆ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ನಲ್ಲಿ ಭಾರತದ ಎರಡೂ ತಂಡಗಳು ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದವು. ಟೂರ್ನಿಯಲ್ಲಿ 23 ದೇಶಗಳ 39 ತಂಡಗಳು (20 ಪುರುಷರು ಮತ್ತು 19 ಮಹಿಳೆಯರು) ಪಾಲ್ಗೊಂಡಿದ್ದವು.

ADVERTISEMENT

ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ವೇಳೆ ಕ್ರೀಡಾಪಟುಗಳು ಸೇರಿದಂತೆ 5000 ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.