
ಪ್ರಜಾವಾಣಿ ವಾರ್ತೆ
ಬೆಂಗಳೂರು: ಫಿಡೆ ಸಾಮಾಜಿಕ ಮತ್ತು ಶೈಕ್ಷಣಿಕ ಚೆಸ್ ಅಂತರರಾಷ್ಟ್ರೀಯ ಸಮ್ಮೇಳನವು ಭುವನೇಶ್ವರದಲ್ಲಿ 2026ರ ಜನವರಿಯಲ್ಲಿ ನಡೆಯಲಿದೆ. ಫಿಡೆ ಮತ್ತು ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್) ಜಂಟಿಯಾಗಿ ಆಯೋಜಿಸುತ್ತಿರುವ ಈ ಸಮ್ಮೇಳನಕ್ಕೆ ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಆತಿಥ್ಯ ವಹಿಸಲಿದೆ.
ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಚೆಸ್ ಆಟದಲ್ಲಿ ಪಾಲ್ಗೊಳ್ಳುವುದನ್ನು ಪ್ರೋತ್ಸಾಹಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಚೆಸ್ ಆಡುವ ಅಭ್ಯಾಸ ಬೆಳೆಸಲು ಹಾಗೂ ಜ್ಞಾನಾರ್ಜನೆಯನ್ನು ಹೆಚ್ಚಿಸಲು ಈ ಸಮ್ಮೇಳನವು ಪೂರಕವಾಗಿದೆ ಎಂದು ಫಿಡೆ ಅಧ್ಯಕ್ಷ ಅರ್ಕಾಡಿ ದ್ವೊರಕೊವಿಚ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.