ADVERTISEMENT

ಜನನ ಪ್ರಮಾಣಪತ್ರ ತಿರುಚಿದ ಪ್ರಕರಣ: ಲಕ್ಷ್ಯ ಸೇನ್, ಸೋದರ ವಿರುದ್ಧ ಪ್ರಕರಣ ರದ್ದು

ಪಿಟಿಐ
Published 29 ಜುಲೈ 2025, 0:48 IST
Last Updated 29 ಜುಲೈ 2025, 0:48 IST
<div class="paragraphs"><p> ಲಕ್ಷ್ಯ ಸೇನ್  </p></div>

ಲಕ್ಷ್ಯ ಸೇನ್

   

ಪಿಟಿಐ ಚಿತ್ರ

ನವದೆಹಲಿ: ಜನನ ಪ್ರಮಾಣಪತ್ರ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್‌, ಅವರ ಸೋದರ ಚಿರಾಗ್ ಸೇನ್‌, ಕೋಚ್‌ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಅನ್ನು ಸುಪ್ರೀಂ ಕೋರ್ಟ್‌ ಸೋಮವಾರ ರದ್ದುಗೊಳಿಸಿದೆ.

ADVERTISEMENT

ಈ ಕ್ರಿಮಿನಲ್‌ ಪ್ರಕರಣದ ವಿಚಾರಣೆ ಮುಂದುವರಿಸುವುದು ನ್ಯಾಯ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಂಡಂತೆ ಎಂದು ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಅರವಿಂದ ಕುಮಾರ್ ಅವರನ್ನು ಒಳಗೊಂಡ ಪೀಠವು ಅಭಿಪ್ರಾಯಪಟ್ಟಿತು.

ಲಕ್ಷ್ಯ ಮತ್ತು ಚಿರಾಗ್ ಸೇನ್ ಅವರ ಜನನ ಪ್ರಮಾಣ ಪತ್ರ ಫೋರ್ಜರಿ ಮಾಡಲಾಗಿದೆ ಎಂದು ದೂರಿ ಎಂ.ಜಿ.ನಾಗರಾಜ್ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಆಟಗಾರರ ಮತ್ತು ಕೋಚ್‌ ವಿಮಲ್ ಕುಮಾರ್‌ ವಿರುದ್ಧ ಕ್ರಮ ಕೈಗೊಳ್ಳದಂತೆ ತಡೆ ನೀಡಲು ನಿರಾಕರಿಸಿತ್ತು.

ತಮ್ಮ ಮೇಲೆ ಪೊಲೀಸರು ಕ್ರಮ ಕೈಗೊಳ್ಳದಂತೆ ತಡೆ ನೀಡಬೇಕು ಎಂದು ಕೋರಿ ಲಕ್ಷ್ಯ ಸೇನ್‌ ಮತ್ತು ಇತರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.