ಬೆಂಗಳೂರು: ವಿರಾಜ್ ಮಾದಪ್ಪ ಮತ್ತು ವೀರ್ ಅಹ್ಲಾವತ್ ಅವರು ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್ ಗಾಲ್ಫ್ ಟೂರ್ನಿಯಲ್ಲಿ ಮುನ್ನಡೆ ಹಂಚಿಕೊಂಡಿದ್ದಾರೆ.
ಮೊದಲ ಸುತ್ತಿನ ಪಂದ್ಯಗಳ ಬಳಿಕ ಈ ಇಬ್ಬರು ಯುವ ಆಟಗಾರರು, ಯುವರಾಜ್ ಸಿಂಗ್ ಸಂಧು, ರಶೀದ್ ಖಾನ್ ಮತ್ತು ಮಿಲಿಂದ್ ಸೋನಿ ಅವರಿಗಿಂತ ಮುಂದಿದ್ದರು.
ಮಹಿಳೆಯರ ವಿಭಾಗದಲ್ಲಿ ಬಕ್ಷಿ ಸಹೋದರಿಯರಾದ ಹಿತಾಶ್ರೀ ಹಾಗೂ ಜಾಹ್ನವಿ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದರು. ಅವನಿ ಪ್ರಶಾಂತ್ ಜಂಟಿ ಮೂರನೇ ಸ್ಥಾನದಲ್ಲಿದ್ದರು.
ಪುರುಷರ ವಿಭಾಗದಲ್ಲಿ ನಾಲ್ಕು ಮತ್ತು ಮಹಿಳೆಯರ ವಿಭಾಗದಲ್ಲಿ ಮೂರು ಮಂದಿಯನ್ನು ಏಷ್ಯನ್ ಗೇಮ್ಸ್‌ಗೆ ಆಯ್ಕೆ ಮಾಡಲಾಗುತ್ತದೆ. ಈ ವರ್ಷಾಂತ್ಯದಲ್ಲಿ ಚೀನಾದಲ್ಲಿ ಗೇಮ್ಸ್ ನಿಗದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.