ADVERTISEMENT

ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಸಾತ್ವಿಕ್‌– ಚಿರಾಗ್‌ ಜೋಡಿಗೆ ಸೋಲು

ಪಿಟಿಐ
Published 14 ಜನವರಿ 2023, 20:01 IST
Last Updated 14 ಜನವರಿ 2023, 20:01 IST

ಕ್ವಾಲಾಲಂಪುರ: ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್‌ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಗೆಲುವಿನ ಓಟಕ್ಕೆ ತಡೆಬಿದ್ದಿದೆ.

ಇಲ್ಲಿ ನಡೆಯುತ್ತಿರುವ ಟೂರ್ನಿಯ ಪುರುಷರ ಡಬಲ್ಸ್ ಸೆಮಿಫೈನಲ್‌ ಪಂದ್ಯದಲ್ಲಿ ಶನಿವಾರ ಭಾರತದ ಆಟಗಾರರು 16–21, 21–11, 15–21ರಿಂದ ಚೀನಾದ ಲಿಯಾಂಗ್‌ ವೇ ಕೆಂಗ್‌ ಮತ್ತು ವಾಂಗ್ ಚಾಂಗ್‌ ಎದುರು ಸೋತರು.

ಇದರೊಂದಿಗೆ ಟೂರ್ನಿಯಲ್ಲಿ ಭಾರತದ ಸವಾಲಿಗೆ ತೆರೆಬಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.