ADVERTISEMENT

ಕೊಕ್ಕೊ: ಮಂಗಳೂರು ವಿವಿಗೆ ಚಾಂಪಿಯನ್‌ ಪಟ್ಟ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2025, 13:13 IST
Last Updated 12 ಏಪ್ರಿಲ್ 2025, 13:13 IST
ಉಡುಪಿಯಲ್ಲಿ ಶನಿವಾರ ಮುಕ್ತಾಯಗೊಂಡ ಅಖಿಲ ಭಾರತ ಅಂತರ ವಿವಿ ಪುರುಷರ ಕೊಕ್ಕೊ ಟೂರ್ನಿಯ ಪ್ರಶಸ್ತಿ ಗೆದ್ದ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಆಟಗಾರರು ಕೋಚ್ ಮತ್ತು ಅತಿಥಿಗಳ ಜೊತೆ ಸಂಭ್ರಮಿಸಿದರು
ಉಡುಪಿಯಲ್ಲಿ ಶನಿವಾರ ಮುಕ್ತಾಯಗೊಂಡ ಅಖಿಲ ಭಾರತ ಅಂತರ ವಿವಿ ಪುರುಷರ ಕೊಕ್ಕೊ ಟೂರ್ನಿಯ ಪ್ರಶಸ್ತಿ ಗೆದ್ದ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಆಟಗಾರರು ಕೋಚ್ ಮತ್ತು ಅತಿಥಿಗಳ ಜೊತೆ ಸಂಭ್ರಮಿಸಿದರು   

ಮೂಡುಬಿದಿರೆ (ದಕ್ಷಿಣ ಕನ್ನಡ): ಆತಿಥೇಯ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಕೊಕ್ಕೊ ಟೂರ್ನಿಯ ಪ್ರಶಸ್ತಿ ಗೆದ್ದುಕೊಂಡಿತು.

ಶನಿವಾರ ನಡೆದ ಫೈನಲ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ 11-10 ಪಾಯಿಂಟ್ಸ್ ಮತ್ತು 5 ನಿಮಿಷಗಳ ಅಂತರದಿಂದ ಮುಂಬೈ ವಿಶ್ವವಿದ್ಯಾಲಯದ ವಿರುದ್ಧ ಜಯ ಸಾಧಿಸಿತು. ಈ ಮೂಲಕ ಎರಡನೇ ಬಾರಿ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು.

ಮಂಗಳೂರು ವಿವಿಯನ್ನು ಪ್ರತಿನಿಧಿಸಿದ 15 ಮಂದಿ ಆಟಗಾರರ ಪೈಕಿ 13 ಮಂದಿ ಆಳ್ವಾಸ್ ಕಾಲೇಜು ವಿದ್ಯಾರ್ಥಿಗಳು ಎಂದು ಆಳ್ವಾಸ್ ಕಾಲೇಜಿನ ಪ್ರಕಟಣೆ ತಿಳಿಸಿದೆ.

ADVERTISEMENT

ಲೀಗ್ ಪಂದ್ಯಾಗಳಲ್ಲಿ ಮಂಗಳೂರು ವಿವಿ ತಂಡ ದೆಹಲಿ ವಿವಿ, ಹೇಮಚಂದ್ ವಿವಿ ಹಾಗೂ ಸಾವಿತ್ರಿ ಬಾಯಿ ಫುಲೆ ವಿವಿ ವಿರುದ್ಧ ಜಯ ಗಳಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿತ್ತು. ಎಂಟರ ಘಟ್ಟದ ಪಂದ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ವಿವಿ ವಿರುದ್ಧ ಗೆದ್ದಿತ್ತು. ಎಸ್ಆರ್‌ಟಿಎಂಯು ವಿರುದ್ಧ ಗೆದ್ದು ಫೈನಲ್‌ಗೆ ಲಗ್ಗೆ ಇರಿಸಿತ್ತು.

ಆಳ್ವಾಸ್‌ ಕಾಲೇಜಿನ ದೀಕ್ಷಿತ್ ಉತ್ತಮ ಆಕ್ರಮಣಕಾರಿ ಆಟಗಾರ ಪ್ರಶಸ್ತಿ ಪಡೆದರೆ, ನಿಖಿಲ್ ಉತ್ತಮ ರಕ್ಷಕ ಪ್ರಶಸ್ತಿಗೆ ಗಳಿಸಿದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.