
ಪ್ರಜಾವಾಣಿ ವಾರ್ತೆ
ಬ್ಯಾಸ್ಕೆಟ್‌ಬಾಲ್
ಬೆಂಗಳೂರು: ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆಯು (ಕೆಎಸ್‌ಬಿಬಿಎ) 2025–26ನೇ ಋತುವಿನ ‘ಮಾತೃ ಕಪ್’ ಮಹಿಳಾ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ಅನ್ನು ಮಾರ್ಚ್ 5ರಿಂದ 8ರ ವರೆಗೆ ಆಯೋಜಿಸಿದೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ.
ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ, ಸಂಸ್ಥೆಯ ಸಂಯೋಜನೆಗೆ ಒಳಪಟ್ಟ ಜಿಲ್ಲಾ ಬ್ಯಾಸ್ಕೆಟ್‌ಬಾಲ್ ಸಂಸ್ಥೆಗಳು ಹಾಗೂ ಸದಸ್ಯ ಕ್ಲಬ್‌ಗಳು ಫೆ.25ರ ಒಳಗೆ ksbb08@gmail.comಗೆ ಪ್ರವೇಶ ಕೋರಿ ಅರ್ಜಿ ಸಲ್ಲಿಸಬೇಕೆಂದು ಕೆಎಸ್‌ಬಿಬಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.