ADVERTISEMENT

ಬೆಂಗಳೂರು ಕ್ರೀಡಾ ರಾಜಧಾನಿಯಾಗಲಿ: ಬಸವರಾಜ ಬೊಮ್ಮಾಯಿ

ಕರ್ನಾಟಕ ಎರಡನೇ ಮಿನಿ ಒಲಿಂಪಿಕ್ಸ್‌ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 16 ಮೇ 2022, 14:40 IST
Last Updated 16 ಮೇ 2022, 14:40 IST
ಬೆಂಗಳೂರಿನ ಕ್ರೀಡಾಂಗಣದಲ್ಲಿ ಸೋಮವಾರ ಮಿನಿ ಒಲಿಂಪಿಕ್ ಕೂಟಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ಅಥ್ಲೀಟ್‌ಗಳಿಂದ ಕ್ರೀಡಾಜ್ಯೋತಿ ಸ್ವೀಕರಿಸಿದರು. ಕೆಒಎ ಅಧ್ಯಕ್ಷ ಕೆ.ಗೋವಿಂದರಾಜು ಮತ್ತು ಸಚಿವ ಕೆ.ಸಿ. ನಾರಾಯಣ ಗೌಡ ಇದ್ದರು–ಪ್ರಜಾವಾಣಿ ಚಿತ್ರ
ಬೆಂಗಳೂರಿನ ಕ್ರೀಡಾಂಗಣದಲ್ಲಿ ಸೋಮವಾರ ಮಿನಿ ಒಲಿಂಪಿಕ್ ಕೂಟಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ಅಥ್ಲೀಟ್‌ಗಳಿಂದ ಕ್ರೀಡಾಜ್ಯೋತಿ ಸ್ವೀಕರಿಸಿದರು. ಕೆಒಎ ಅಧ್ಯಕ್ಷ ಕೆ.ಗೋವಿಂದರಾಜು ಮತ್ತು ಸಚಿವ ಕೆ.ಸಿ. ನಾರಾಯಣ ಗೌಡ ಇದ್ದರು–ಪ್ರಜಾವಾಣಿ ಚಿತ್ರ   

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿರುವ ಬೆಂಗಳೂರು ಕ್ರೀಡಾ ರಾಜಧಾನಿಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಪಿಕ್ ಸಂಸ್ಥೆ (ಕೆಒಎ) ಆಯೋಜಿಸಿರುವ ಮಿನಿ ಒಲಿಂಪಿಕ್ ಕೂಟಕ್ಕೆಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಎರಡನೇ ಬಾರಿ ಮಿನಿ ಒಲಿಂಪಿಕ್ಸ್ ಆಯೋಜಿಸಲಾಗಿದೆ.ಇದು ಆರಂಭ ಮಾತ್ರ. ಇಲ್ಲಿನ ಅಥ್ಲೀಟ್‌ಗಳು ಇನ್ನೂ ಹೆಚ್ಚಿನ ಸಾಧನೆ ಮಾಡಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಪದಕಗಳನ್ನು ಗೆಲ್ಲುವಂತಾಗಬೇಕು ಎಂದರು.

ADVERTISEMENT

ರಾಜ್ಯಪಾಲ ಥಾವರ್‌ಚಂದ ಗೆಹಲೋತ್ ಮಾತನಾಡಿ, ಭಾರತ ಸರ್ಕಾರ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದ್ದು ಹಲವು ಮಹತ್ವದ ಯೋಜನೆಗಳನ್ನು ರೂಪಿಸಿದೆ‘ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಕೆಒಎ ಅಧ್ಯಕ್ಷ ಕೆ.ಗೋವಿಂದರಾಜು, ಕಾರ್ಯದರ್ಶಿ ಅನಂತರಾಜು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಲಕ್ಷ್ಯಸೇನ್‌ಗೆ ₹ 5 ಲಕ್ಷ ಘೋಷಣೆ

ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ ಭಾರತ ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನ ದ್ರಾವಿಡ್‌– ಪಡುಕೋಣೆ ಕ್ರೀಡಾ ಶ್ರೇಷ್ಠತಾ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ, ತಂಡವನ್ನು ಪ್ರತಿನಿಧಿಸಿದ್ದ ಲಕ್ಷ್ಯ ಸೇನ್ ಅವರಿಗೆ ರಾಜ್ಯ ಸರ್ಕಾರ ₹ 5 ಲಕ್ಷ ಬಹುಮಾನ ನೀಡಲಾಗುವುದು ಎಂದು ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.