ADVERTISEMENT

ರ‍್ಯಾಪಿಡ್‌ ಚೆಸ್‌ ಟೂರ್ನಿ: ಅನಿಷ್ಕಾ ಬಿಯಾನಿಗೆ ಚಿನ್ನ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 13:41 IST
Last Updated 4 ಸೆಪ್ಟೆಂಬರ್ 2022, 13:41 IST

ಮುಂಬೈ: ಮುಂಬೈನ ಆರು ವರ್ಷದ ಬಾಲಕಿ ಅನಿಷ್ಕಾ ಬಿಯಾನಿ ಅವರು ಮಲೇಷ್ಯಾದ ಕ್ವಾಲಾಲಂಪುರದಲ್ಲಿ ಭಾನುವಾರ ಕೊನೆಗೊಂಡ ರ‍್ಯಾಪಿಡ್‌ ಚೆಸ್‌ ಟೂರ್ನಿಯಲ್ಲಿ ಚಿನ್ನ ಗೆದ್ದುಕೊಂಡರು.

ಆರು ವರ್ಷದೊಳಗಿನವರ ವಿಭಾಗದಲ್ಲಿ ಸ್ಪರ್ಧಿಸಿದ ಅವರು ಆರು ಸುತ್ತುಗಳಲ್ಲಿ ನಾಲ್ಕು ಪಾಯಿಂಟ್‌ ಸಂಗ್ರಹಿಸಿ ಅಗ್ರಸ್ಥಾನ ಪಡೆದರು. ಎಂಟು ರಾಷ್ಟ್ರಗಳ ಸ್ಪರ್ಧಿಗಳು ಈ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು.

ಅನಿಷ್ಕಾ ಅವರು ಈ ವರ್ಷದ ಆರಂಭದಲ್ಲಿ ಹೈದರಾಬಾದ್‌ನಲ್ಲಿ ನಡೆದಿದ್ದ ಅಖಿಲ ಭಾರತ ಫಿಡೆ ರೇಟಿಂಗ್‌ ಚೆಸ್‌ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.