ADVERTISEMENT

ವಿಜಯನಗರದಲ್ಲಿ 31ರಿಂದ ರಾಷ್ಟ್ರೀಯ ಮಹಿಳಾ ಬಾಕ್ಸಿಂಗ್‌

ಪಿಟಿಐ
Published 27 ಡಿಸೆಂಬರ್ 2018, 18:48 IST
Last Updated 27 ಡಿಸೆಂಬರ್ 2018, 18:48 IST

ಬೆಂಗಳೂರು: ಬಳ್ಳಾರಿ ಜಿಲ್ಲೆಯ ವಿಜಯನಗರದಲ್ಲಿ ಡಿಸೆಂಬರ್‌ 31ರಿಂದ ಜನವರಿ 6ರವರೆಗೆ ರಾಷ್ಟ್ರೀಯ ಮಹಿಳಾ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ ಆಯೋಜನೆಯಾಗಿದೆ.

ಜಿಂದಾಲ್‌ ಸ್ಟೀಲ್‌ ವರ್ಕ್ಸ್‌ (ಜೆಎಸ್‌ಡಬ್ಲ್ಯು) ಒಡೆತನದ ಇನ್‌ಸ್ಪೈರ್‌ ಇನ್ಸ್‌ಟಿಟ್ಯೂಟ್‌ ಆಫ್‌ ಸ್ಪೋರ್ಟ್ಸ್‌ ಕೇಂದ್ರದಲ್ಲಿ ಪಂದ್ಯಗಳು ನಡೆಯಲಿವೆ.

ಭಾರತ ಬಾಕ್ಸಿಂಗ್‌ ಫೆಡರೇಷನ್‌, ಇದೇ ಮೊದಲ ಬಾರಿಗೆ ಖಾಸಗಿ ಮಾಲೀಕತ್ವದ ಕ್ರೀಡಾ ಕೇಂದ್ರದಲ್ಲಿ ಚಾಂಪಿಯನ್‌ಷಿಪ್‌ ಆಯೋಜಿಸಿದೆ.

ADVERTISEMENT

ಒಟ್ಟು 300 ಮಂದಿ ಬಾಕ್ಸರ್‌ಗಳು ಇದರಲ್ಲಿ ಭಾಗವಹಿಸಲಿದ್ದು, ಹತ್ತು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.