ಪ್ರಜಾವಾಣಿ ಸಂಗ್ರಹ ಚಿತ್ರ
ಬೆಂಗಳೂರು: ಕರ್ನಾಟಕದ ತುಷಾರ್ ಬಿ. ಅವರು ಚೆನ್ನೈನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರರಾಜ್ಯ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಪುರುಷರ 800ಮೀ. ಓಟದಲ್ಲಿ ಶನಿವಾರ ಬೆಳ್ಳಿ ಪದಕ ಗೆದ್ದುಕೊಂಡರು.
ತುಷಾರ್ ಅವರು 1ನಿ.48.82ಸೆ. ಗಳಲ್ಲಿ ಗುರಿ ಮುಟ್ಟಿದರು. ಹರಿಯಾಣದ ಕೃಷ್ಣ ಕುಮಾರ್ (1ನಿ.48.41ಸೆ.) ಚಿನ್ನ ಗೆದ್ದರು.
ಮಹಿಳೆಯರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಕರೀಷ್ಮಾ ಎಸ್. ಅವರು 51.30ಮೀ. ಎಸೆಯುವುದರೊಂದಿಗೆ ಕಂಚಿನ ಪದಕ ಜಯಿಸಿದರು. 400 ಮೀ. ಹರ್ಡಲ್ಸ್‌ನಲ್ಲಿ ದೀಕ್ಷಿತಾ ಆರ್. (1ನಿ.0.09ಸೆ.) ಕಂಚಿಗೆ ತೃಪ್ತಿಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.