ADVERTISEMENT

ಡಿ.31ರಿಂದ ರಾಷ್ಟ್ರಮಟ್ಟದ ಕೊಕ್ಕೊ ಟೂರ್ನಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 15:45 IST
Last Updated 25 ಡಿಸೆಂಬರ್ 2025, 15:45 IST
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕೊಕ್ಕೊ ಸಂಸ್ಥೆ ಅಧ್ಯಕ್ಷ ಲೋಕೇಶ್ವರ್ ಮಾಹಿತಿ ನೀಡಿದರು
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕೊಕ್ಕೊ ಸಂಸ್ಥೆ ಅಧ್ಯಕ್ಷ ಲೋಕೇಶ್ವರ್ ಮಾಹಿತಿ ನೀಡಿದರು   

ಬೆಂಗಳೂರು: ರಾಷ್ಟ್ರಮಟ್ಟದ ಜೂನಿಯರ್ ಬಾಲಕ ಮತ್ತು ಬಾಲಕಿಯರ ಕೊಕ್ಕೊ ಚಾಂಪಿಯನ್‌ಷಿಪ್‌ ಇದೇ 31ರಿಂದ ಜನವರಿ 4ರವರೆಗೆ ನಗರದ ಗುಂಜೂರು ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕೊಕ್ಕೊ ಸಂಸ್ಥೆ ಅಧ್ಯಕ್ಷ ಲೋಕೇಶ್ವರ್ ಹೇಳಿದರು. 

ಕರ್ನಾಟಕ ರಾಜ್ಯ ಕೊಕ್ಕೊ ಸಂಸ್ಥೆ ಮತ್ತು ಗುಂಜೂರು ಕೊಕ್ಕೊ ಕ್ಲಬ್ ಆಶ್ರಯದಲ್ಲಿ 44ನೇ ಆವೃತ್ತಿಯ ಚಾಂಪಿಯನ್‌ಷಿಪ್‌ ನಡೆಯಲಿದ್ದು, ಹೊನಲು ಬೆಳಕಿನಲ್ಲಿ ನಡೆಯುವ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ 32 ತಂಡಗಳು ಭಾಗವಹಿಸಲಿವೆ. ಅದಕ್ಕಾಗಿ ನಾಲ್ಕು ಕೋರ್ಟ್‌ಗಳನ್ನು ನಿರ್ಮಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. 

‘ಕೊಕ್ಕೊ ಇಂದು ಅಂತರರಾಷ್ಟ್ರೀಯ ಕ್ರೀಡೆಯಾಗಿ ಬೆಳೆಯುತ್ತಿದೆ. ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಈ ಕ್ರೀಡೆಯನ್ನು ಸೇರ್ಪಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್‌ನಲ್ಲೂ ಸೇರ್ಪಡೆಯಾಗುವ ವಿಶ್ವಾಸವಿದೆ’ ಎಂದು ತಿಳಿಸಿದರು.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಂಸದ ಪಿ.ಸಿ.ಮೋಹನ್, ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಗುಂಜೂರು ಕೊಕ್ಕೊ ಕ್ಲಬ್ ಅಧ್ಯಕ್ಷ ಜಿ.ಟಿ.ನಾಗೇಶ್ ತಿಳಿಸಿದರು. 

ರಾಜ್ಯ ಕೊಕ್ಕೊ ಸಂಸ್ಥೆಯ ಪದಾಧಿಕಾರಿಗಳಾದ ಜಯರಾಮ್, ವೆಂಕಟೇಶ್, ಜಿ.ಟಿ.ಚಂದ್ರಪ್ಪ, ಜಗದೀಶ್, ಬಸವರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.