ADVERTISEMENT

ರಾಷ್ಟ್ರಮಟ್ಟದ ಕಬಡ್ಡಿ 19ರಿಂದ

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 21:20 IST
Last Updated 6 ಜನವರಿ 2023, 21:20 IST
   

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಇಲ್ಲಿನ ಜೊಲ್ಲೆ ಸಮೂಹವು ಜನವರಿ 19ರಿಂದ 22ರವರೆಗೆ ಮುನ್ಸಿಪಲ್ ಪ್ರೌಢಶಾಲೆ ಆವರಣದಲ್ಲಿ ಅಖಿಲ ಭಾರತ ‘ಎ’ ದರ್ಜೆ ಪುರುಷರ ಹಾಗೂ ಮಹಿಳೆಯರ ಹೊನಲು ಬೆಳಕಿನ ಕಬಡ್ಡಿ ಟೂರ್ನಿ ಆಯೋಜಿಸಿದೆ.

‘ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ತಲಾ 40 ತಂಡಗಳು ಪಾಲ್ಗೊಳ್ಳಲಿವೆ. ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಒಟ್ಟು ₹11 ಲಕ್ಷ ಮೊತ್ತದ ನಗದು ಬಹುಮಾನಗಳಿವೆ’ ಎಂದು ಮ್ಯಾಗ್ನಂ ಟಫ್ ಇಂಡಿಯಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಸವಪ್ರಸಾದ ಜೊಲ್ಲೆ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 98860 00142, 9341732259 ಸಂಪರ್ಕಿಸಬೇಕು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.