ADVERTISEMENT

ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ಕೇಟಿಂಗ್ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2022, 13:44 IST
Last Updated 9 ಡಿಸೆಂಬರ್ 2022, 13:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕ ರೋಲರ್ ಸ್ಕೇಟಿಂಗ್ ಸಂಸ್ಥೆಯು ಭಾನುವಾರದಿಂದ60ನೇ ರಾಷ್ಟ್ರೀಯರೋಲರ್ ಸ್ಕೇಟಿಂಗ್ ಚಾಂಪಿಯನ್‌ಷಿಪ್ ಆಯೋಜಿಸುತ್ತಿದೆ ಎಂದು ಭಾರತ ರೋಲರ್ ಸ್ಕೇಟಿಂಗ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ನರೇಶ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

‘ಬೆಂಗಳೂರಿನ ತ್ಯಾಗರಾಜನಗರದಲ್ಲಿರುವ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಆಟದ ಮೈದಾನದಲ್ಲಿ ಡಿ. 11ರಂದು ಚಾಂಪಿಯನ್‌ಷಿಪ್ ಉದ್ಘಾಟನೆಯಾಗಲಿದೆ. ಬೆಂಗಳೂರು ಮತ್ತು ತುಮಕೂರಿನಲ್ಲಿ ಸ್ಪರ್ಧೆಗಳು ನಡೆಯಲಿವೆ. ಕರ್ನಾಟಕ ಸೇರಿದಂತೆ ಒಟ್ಟು 29 ರಾಜ್ಯಗಳಿಂದ 3,912 ಸ್ಕೇಟಿಂಗ್‌ಪಟುಗಳು ಸ್ಪರ್ಧಿಸಲಿದ್ದಾರೆ. ಇದರಲ್ಲಿ 2,214 ಬಾಲಕಿಯರಿದ್ದಾರೆ’ ಎಂದು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

‘11 ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಕೇಂದ್ರ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.