ಬೆಂಗಳೂರು: ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಡಾ.ಸಂತೋಷ್ ಎಚ್.ಆರ್. ಅವರು ಚಂಡಿಗಢದಲ್ಲಿ ಈಚೆಗೆ ನಡೆದ ಅಖಿಲ ಭಾರತ ನಾಗರಿಕ ಸೇವೆಗಳ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.
45 ವರ್ಷದ ಪುರುಷರ ಡಬಲ್ಸ್‌ನಲ್ಲಿ ಡಾ.ಸಂತೋಷ್ ಅವರು ಆಲ್ಫ್ರೆಡ್ ಪಿ.ಎ. ಜೊತೆಗೂಡಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. 45–50 ವರ್ಷದ ಮಿಕ್ಸೆಡ್ ಡಬಲ್ಸ್‌ನಲ್ಲಿ ಜೊತೆಗಾರ್ತಿ ವಿಜಯರಾಣಿ ಅವರೊಂದಿಗೆ ರನ್ನರ್ಸ್ ಅಪ್ ಸ್ಥಾನ ಪಡೆದುಕೊಂಡಿದ್ದಾರೆ. ಜತೆಗೆ 45 ವರ್ಷಕ್ಕಿಂತ ಮೇಲಿನ ವಿಭಾಗದಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಅವರು ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.