ನವದೆಹಲಿಯಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ
–ಪಿಟಿಐ ಚಿತ್ರ
ನವದೆಹಲಿ: ನೂತನ ರಾಷ್ಟ್ರೀಯ ಕ್ರೀಡಾ ನೀತಿಯು (ಎನ್‌ಎಸ್‌ಪಿ)ದೇಶದ ಕ್ರೀಡಾಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ವ್ಯಕ್ತಪಡಿಸಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಶುಕ್ರವಾರ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದರು.
‘ದೇಶವು ಇವತ್ತು ಕ್ರೀಡಾ ಕ್ಷೇತ್ರದಲ್ಲಿ ಬಹುದೂರ ಸಾಗಿಬಂದಿದೆ. ಭವಿಷ್ಯ ರೂಪಿಸಿಕೊಳ್ಳುವ ಅವಕಾಶಗಳಿರುವ ಕ್ಷೇತ್ರ ಇದಾಗಿದೆ. ಕ್ರೀಡೆಯು ದೇಶದ ಅಭಿವೃದ್ಧಿಯ ಮಹತ್ವದ ಅಂಗವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಕ್ರೀಡಾಪಟುಗಳನ್ನಾಗಿ ರೂಪಿಸಲು ಒಲವು ತೋರುತ್ತಿದ್ದಾರೆ. ಇದು ನನಗೆ ಸಂತಸ ತಂದಿದೆ. ಮಕ್ಕಳು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡರೆ ಸಂತಸಪಡುವ ಪಾಲಕರ ಸಂಖ್ಯೆ ಹೆಚ್ಚುತ್ತಿದೆ’ ಎಂದರು.
‘ಕ್ರೀಡೆಯನ್ನು ಮತ್ತಷ್ಟು ಬೆಳೆಸಲು ರಾಷ್ಟ್ರೀಯ ಕ್ರೀಡಾ ನೀತಿಯನ್ನು ರೂಪಿಸಿದ್ದೇವೆ. ಇದು ಶಾಲೆಯಿಂದ ಒಲಿಂಪಿಕ್ಸ್‌ವರೆಗೆ ಎಲ್ಲ ಹಂತಗಳಲ್ಲಿಯೂ ಬೆಳವಣಿಗೆಗೆ ನೆರವಾಗಲಿದೆ. ತರಬೇತಿ, ಫಿಟ್‌ನೆಸ್ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.