ADVERTISEMENT

ನಿಮ್ಮನ್ನು ನೀವು ನಂಬಿ: ಸ್ವಾತಂತ್ರ್ಯ ದಿನದಂದು ಯುವಕರಿಗೆ ನೀರಜ್ ಚೋಪ್ರಾ ಸಂದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಆಗಸ್ಟ್ 2021, 6:39 IST
Last Updated 15 ಆಗಸ್ಟ್ 2021, 6:39 IST
ನೀರಜ್ ಚೋಪ್ರಾ
ನೀರಜ್ ಚೋಪ್ರಾ    

ನವದೆಹಲಿ: ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಸೇರಿದಂತೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಿಂಚಿದ ಕೀಡಾಪಟುಗಳು ಭಾನುವಾರ ಕೆಂಪು ಕೋಟೆಯಲ್ಲಿ ನಡೆದ 75 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದರು.

ಇದೇ ವೇಳೆ ಮಾತನಾಡಿರುವ ನೀರಜ್‌ ಚೋಪ್ರಾ, 'ಮೊದಲು ನಿಮ್ಮ ಮೇಲೆ ನಿಮಗೆ ನಂಬಿಕೆ ಇರಲಿ. ನಂತರ ನಿಮ್ಮ ತರಬೇತಿದಾರರ ಮೇಲೆ ನಂಬಿಕೆ ಇರಲಿ. ಯಾವುದೇ ಒಳಮಾರ್ಗಗಳನ್ನು ಕಂಡುಕೊಳ್ಳಲು ಪ್ರಯತ್ನಿಸಬೇಡಿ' ಎಂದು ಯುವಕರಿಗೆ ಸಂದೇಶ ನೀಡಿದರು.

ಕೆಂಪುಕೋಟೆಯಲ್ಲಿ ನಡೆದ ರಾಷ್ಟ್ರಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲು ತಮಗೆ ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ನೀರಜ್‌ ಚೋಪ್ರಾ ಧನ್ಯವಾದಗಳನ್ನು ತಿಳಿಸಿದರು.

ADVERTISEMENT

ಒಲಿಂಪಿಕ್ಸ್‌ನ ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊತ್ತಮೊದಲ ಚಿನ್ನ ಗೆದ್ದುಕೊಟ್ಟ ನೀರಜ್ ಚೋಪ್ರಾ, ಪುರುಷರ ಜಾವೆಲಿನ್ ಥ್ರೋ ವಿಶ್ವ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಗರಿಷ್ಠ 87.58 ಮೀಟರ್ ದೂರ ಜಾವೆಲಿನ್ ಎಸೆದಿರುವ ನೀರಜ್ ಚೋಪ್ರಾ, ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 23 ವರ್ಷದ ನೀರಜ್ ಚೋಪ್ರಾ, ಒಲಿಂಪಿಕ್ಸ್‌ನ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದ ಭಾರತದ ಎರಡನೇ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.