ADVERTISEMENT

ವಿಶ್ವಕಪ್ ಹಾಕಿ: ನ್ಯೂಜಿಲೆಂಡ್ ಎದುರು ಭಾರತಕ್ಕೆ ಸೋಲು

​ಪ್ರಜಾವಾಣಿ ವಾರ್ತೆ
Published 22 ಜನವರಿ 2023, 15:59 IST
Last Updated 22 ಜನವರಿ 2023, 15:59 IST
ಹಾಕಿ ತಂಡ
ಹಾಕಿ ತಂಡ   

ಭುವನೇಶ್ವರ: ಭಾರತ ತಂಡವು ಪುರುಷರ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಭಾನುವಾರ ಕ್ರಾಸ್‌ಓವರ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಪರಾಭವಗೊಂಡಿತು.

ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಸೋಲುವ ಮೂಲಕ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಗಳಿಸುವಲ್ಲಿ ಭಾರತ ವಿಫಲವಾಯಿತು.

ಉಭಯ ತಂಡಗಳು ತಲಾ ಮೂರು ಗೋಲು ಗಳಿಸಿ ಸಮಬಲ ಸಾಧಿಸಿದ್ದವು. ಪೆನಾಲ್ಟಿ ಶೂಟೌಟ್‌ನಲ್ಲಿ 4–5 ಗೋಲುಗಳ ಅಂತರದಲ್ಲಿ ಭಾರತ ಪರಾಭವಗೊಂಡಿತು.

ADVERTISEMENT

ಭಾರತ ಕ್ವಾರ್ಟರ್‌ಫೈನಲ್‌ ಪ್ರವೇಶ ಮಾಡುವ ಕನಸು ಭಗ್ನಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.