ADVERTISEMENT

ಒಲಿಂಪಿಯನ್‌ ಈಜುಪಟು ರೋಲ್ಯಾಂಡ್ ನಿಧನ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 21:20 IST
Last Updated 22 ಡಿಸೆಂಬರ್ 2019, 21:20 IST
ರೋಲ್ಯಾಂಡ್ ಮ್ಯಾಥ್ಸ್‌
ರೋಲ್ಯಾಂಡ್ ಮ್ಯಾಥ್ಸ್‌   

ಪ್ಯಾರಿಸ್ (ಎಎಫ್‌ಪಿ): ಒಲಿಂಪಿಕ್ಸ್‌ನಲ್ಲಿ ನಾಲ್ಕು ಬಾರಿ ಚಿನ್ನ ಗೆದ್ದಿದ್ದ ಈಜುಪಟು ಜರ್ಮನಿಯ ರೋಲ್ಯಾಂಡ್ ಮ್ಯಾಥ್ಸ್‌ (69) ಭಾನುವಾರ ನಿಧನರಾದರು.

1968ರ ಮೆಕ್ಸಿಕೊ ಮತ್ತು 1972ರ ಮ್ಯೂನಿಚ್ ಒಲಿಂಪಿಕ್ಸ್‌ನಲ್ಲಿ ಪೂರ್ವ ಜರ್ಮನಿಯನ್ನು ಪ್ರತಿನಿಧಿಸಿದ್ದ ಅವರು 100 ಮೀಟರ್ಸ್ ಮತ್ತು 200 ಮೀಟರ್ಸ್‌ ಬ್ಯಾಕ್‌ಸ್ಟ್ರೋಕ್‌ ಸ್ಪರ್ಧೆಗ ಳಲ್ಲಿ ಚಾಂಪಿಯನ್ ಆಗಿದ್ದರು. ಈ ಎರಡು ಒಲಿಂಪಿಕ್ಸ್‌ನ ಮೆಡ್ಲೆ ರಿಲೆಯಲ್ಲಿ ಬೆಳ್ಳಿ ಪದಕ ಗಳಿಸಿದ್ದ ಅವರು 1972ರ ಫ್ರೀಸ್ಟೈಲ್ ರಿಲೆಯಲ್ಲಿ ಕಂಚಿನ ಪದಕ ಗೆದ್ದಿದ್ದರು. 1976ರ ಮಾಂಟ್ರಿಯಲ್ ಒಲಿಂಪಿಕ್ಸ್‌ನ 100 ಮೀಟರ್ಸ್ ಬ್ಯಾಕ್‌ ಸ್ಟ್ರೋಕ್‌ನಲ್ಲೂ ಕಂಚು ಗಳಿಸಿದ್ದರು. ಮೂರು ಬಾರಿ ವಿಶ್ವ ಚಾಂಪಿಯನ್‌ ಕೂಡ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT