ADVERTISEMENT

ಒಲಿಂಪಿಕ್ಸ್‌ಗೆ ಬಿಡ್‌ ಸಲ್ಲಿಸಲು ಐಒಎ ಆಸಕ್ತಿ

ಪಿಟಿಐ
Published 3 ಡಿಸೆಂಬರ್ 2018, 16:09 IST
Last Updated 3 ಡಿಸೆಂಬರ್ 2018, 16:09 IST

ನವದೆಹಲಿ: ಭಾರತ ಒಲಿಂಪಿಕ್‌ ಸಂಸ್ಥೆ (ಐಒಎ) 2032ರ ಒಲಿಂಪಿಕ್ಸ್‌ ಕ್ರೀಡಾಕೂಟ ಆಯೋಜಿಸಲು ಒಲವು ತೋರಿದ್ದು, ಬಿಡ್‌ ಸಲ್ಲಿಸಲು ಸಿದ್ಧತೆ ನಡೆಸಿದೆ.

ಅಂತರರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ (ಐಒಸಿ) ಮುಖ್ಯಸ್ಥ ಥಾಮಸ್‌ ಬಾಕ್‌ ಅವರು ಈ ವರ್ಷದ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಐಒಎ ಅಧ್ಯಕ್ಷ ನರೀಂದರ್‌ ಬಾತ್ರಾ, ಬಿಡ್‌ ಸಲ್ಲಿಸುವ ಕುರಿತು ಬಾಕ್‌ ಜೊತೆ ಚರ್ಚಿಸಿದ್ದರು. ಇದಕ್ಕೆ ಥಾಮಸ್‌ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

‘2032ರ ಒಲಿಂಪಿಕ್ಸ್‌ಗೆ ಆತಿಥ್ಯವಹಿಸಲು ನಾವು ಸಿದ್ಧರಿದ್ದೇವೆ. ಈ ಕುರಿತು ಐಒಸಿಗೆ ಪತ್ರವನ್ನೂ ಬರೆದಿದ್ದೇವೆ. ಬಿಡ್‌ ಸಮಿತಿ ಜೊತೆ ನಡೆದ ಸಭೆಯಲ್ಲೂ ಇದನ್ನು ಪ್ರಸ್ತಾಪಿಸಿದ್ದು, ಅದಕ್ಕೆ ಸಮಿತಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಸಂಬಂಧ ಸರ್ಕಾರದ ಜೊತೆಯೂ ಮಾತುಕತೆ ನಡೆಸುತ್ತೇವೆ’ ಎಂದು ಐಒಎ ಮಹಾಕಾರ್ಯದರ್ಶಿ ರಾಜೀವ್‌ ಮೆಹ್ತಾ ತಿಳಿಸಿದ್ದಾರೆ.

ADVERTISEMENT

ಮುಂಬೈ ಮತ್ತು ನವದೆಹಲಿಯಲ್ಲಿ ಸ್ಪರ್ಧೆಗಳನ್ನು ನಡೆಸಲು ಐಒಎ ಚಿಂತಿಸಿದೆ. 2022ರಲ್ಲಿ ಬಿಡ್‌ ಪ್ರಕ್ರಿಯೆ ನಡೆಯಲಿದೆ.

ಈ ಬಾರಿಯ ಏಷ್ಯನ್‌ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಿರುವ ಇಂಡೊನೇಷ್ಯಾ ಕೂಡಾ 2032ರ ಒಲಿಂಪಿಕ್ಸ್‌ಗೆ ಆತಿಥ್ಯವಹಿಸಲು ಆಸಕ್ತಿ ತೋರಿದೆ. ಚೀನಾ, ಆಸ್ಟ್ರೇಲಿಯಾ, ಉತ್ತರ ಮತ್ತು ದಕ್ಷಿಣ ಕೊರಿಯಾ ಹಾಗೂ ಜರ್ಮನಿ ಕೂಡಾ ಬಿಡ್‌ ಸಲ್ಲಿಸಲು ತಯಾರಿ ನಡೆಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.