ADVERTISEMENT

2036ರ ಒಲಿಂಪಿಕ್ಸ್‌ ಆತಿಥ್ಯಕ್ಕೆ ಪೂರ್ಣ ‌ ಸಾಮರ್ಥ್ಯದೊಂದಿಗೆ ತಯಾರಿ: ಮೋದಿ

ಪಿಟಿಐ
Published 4 ಜನವರಿ 2026, 15:54 IST
Last Updated 4 ಜನವರಿ 2026, 15:54 IST
<div class="paragraphs"><p>&nbsp;72ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಉದ್ಘಾಟನಾ ಸಮಾರಂಭದಲ್ಲಿ&nbsp;ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು </p></div>

 72ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು

   

–ಪಿಟಿಐ ಚಿತ್ರ

ವಾರಣಾಸಿ: ‘2036ರ ಒಲಿಂಪಿಕ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಲು ಭಾರತವು ಪೂರ್ಣ ಸಾಮರ್ಥ್ಯದೊಂದಿಗೆ ತಯಾರಿ ನಡೆಸುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.

ADVERTISEMENT

ಇಲ್ಲಿ ಭಾನುವಾರ 72ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ‘2030ರ ಕಾಮನ್‌ವೆಲ್ತ್ ಕ್ರೀಡಾಕೂಟವು ಭಾರತದಲ್ಲಿ ನಡೆಯಲಿದೆ. ಮೆಗಾ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ದೇಶದ ಹೆಚ್ಚು ಹೆಚ್ಚು ಆಟಗಾರರಿಗೆ ಅವಕಾಶ ಒದಗಿಸಲು ತಮ್ಮ ಸರ್ಕಾರ ಬದ್ಧವಾಗಿದೆ’ ಎಂದರು.

‘ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಯೋಜನೆ (ಟಾಪ್ಸ್‌) ನಂತಹ ಉಪಕ್ರಮಗಳು ಕ್ರೀಡಾಪಟುಗಳಿಗೆ ಹೆಚ್ಚಿನ ಸೌಲಭ್ಯವನ್ನು ಕಲ್ಪಿಸಲು ಸಹಕಾರಿಯಾಗಿದೆ. ಅಲ್ಲದೆ, ಕೇಂದ್ರ ಸರ್ಕಾರವು ಕ್ರೀಡಾ ಬಜೆಟ್‌ ಅನ್ನೂ ಗಣನೀಯವಾಗಿ ಹೆಚ್ಚಿಸಿದೆ’ ಎಂದು ತಿಳಿಸಿದರು. 

‘ಉದಯೋನ್ಮುಖ ಕ್ರೀಡಾಪಟುಗಳಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಎಲ್ಲ ರೀತಿಯ ನೆರವನ್ನು ಸರ್ಕಾರ ನೀಡುತ್ತಿದೆ. ಖೇಲೊ ಇಂಡಿಯಾದಂತಹ ಯೋಜನೆಗಳು ಕ್ರೀಡಾ ಪ್ರತಿಭೆಗಳ ಬದುಕಿನ ದಿಕ್ಕನ್ನೇ ಬದಲಿಸುತ್ತಿದೆ’ ಎಂದು ಅಭಿಪ್ರಾಯಪಟ್ಟರು.

‘ಕಳೆದ ಒಂದು ದಶಕದಲ್ಲಿ 17 ವರ್ಷದೊಳಗಿನವರ ಫಿಫಾ ವಿಶ್ವಕಪ್, ಹಾಕಿ ವಿಶ್ವಕಪ್ ಮತ್ತು ಚೆಸ್ ಟೂರ್ನಿಗಳು ಸೇರಿದಂತೆ 20ಕ್ಕೂ ಹೆಚ್ಚು ಪ್ರಮುಖ ಅಂತರರಾಷ್ಟ್ರೀಯ ಕೂಟಗಳು ದೇಶದ ವಿವಿಧ ನಗರಗಳಲ್ಲಿ ನಡೆದಿವೆ’ ಎಂದು ಮೋದಿ ತಿಳಿಸಿದರು.

ಇದೇ 11ರವರೆಗೆ ನಡೆಯಲಿರುವ ವಾಲಿಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ದೇಶದಾದ್ಯಂತ 58 ತಂಡಗಳು ಭಾಗವಹಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.