‘ನಮ್ಮ ಬೆಂಗಳೂರು ಇಂಟರ್‌ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ ಓಪನ್’ ಚೆಸ್ ಟೂರ್ನಿಯ ಪೋಸ್ಟರ್ ಮತ್ತು ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಧರಮ್ ಸಿಂಗ್ ಚೆಸ್ ಆಡಿದರು.
–ಪ್ರಜಾವಾಣಿ ಚಿತ್ರ: ಬಿ.ಕೆ. ಜನಾರ್ದನ
ಬೆಂಗಳೂರು: ನಗರದ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಏ.10ರಿಂದ 18ರವರೆಗೆ ನಡೆಯುವ ‘ನಮ್ಮ ಬೆಂಗಳೂರು ಇಂಟರ್‌ನ್ಯಾಷನಲ್ ಗ್ರ್ಯಾಂಡ್ ಮಾಸ್ಟರ್ ಓಪನ್ ಚೆಸ್ ಟೂರ್ನಿಯು ಒಟ್ಟು ₹55 ಲಕ್ಷ ಬಹುಮಾನ ಮೊತ್ತವನ್ನು ಒಳಗೊಂಡಿದೆ.
ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ಟೂರ್ನಿಯ ಪೋಸ್ಟರ್ ಮತ್ತು ಟೀಸರ್ ಅನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಧರಮ್ ಸಿಂಗ್ ಗುರುವಾರ ಬಿಡುಗಡೆ ಮಾಡಿದರು.
ಬೆಂಗಳೂರು ಇಂಟರ್‌ನ್ಯಾಷನಲ್ ಗ್ರ್ಯಾನ್‌ಮಾಸ್ಟರ್ ಟೂರ್ನಿ ಸಮಿತಿಯ ಸಹಯೋಗದೊಂದಿಗೆ ಕರ್ನಾಟಕ ವಿಧಾನಸಭೆಯು ಆಯೋಜಿಸಿರುವ ಎರಡನೇ ಆವೃತ್ತಿಯ ಈ ಟೂರ್ನಿಯಲ್ಲಿ 15 ದೇಶಗಳಿಂದ 185 ಚೆಸ್‌ಪಟುಗಳು ಭಾಗವಹಿಸಲಿದ್ದಾರೆ. ಗ್ರ್ಯಾಂಡ್ ಮಾಸ್ಟರ್‌ಗಳು, ಅಂತರರಾಷ್ಟ್ರೀಯ ಮಾಸ್ಟರ್ಸ್‌ಗಳು ಮತ್ತು ಉದಯೋನ್ಮುಖ ಆಟಗಾರರು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವರು’ ಎಂದು ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಸೌಮ್ಯಾ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.